Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದ್ದಕ್ಕಿದ್ದಂತೆ ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ

Sidharth Kaul Retires: ವೇಗಿ ಸಿದ್ಧಾರ್ಥ್ ಕೌಲ್ ಅವರು ಭಾರತ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2018 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಿದ್ಧಾರ್ಥ್, 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದ ಅವರು 55 ಪಂದ್ಯಗಳಲ್ಲಿ 58 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Nov 28, 2024 | 9:38 PM

 ಸದ್ಯ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ನಡುವೆ ಟೀಂ ಇಂಡಿಯಾ ವೇಗಿ ಸಿದ್ಧಾರ್ಥ್ ಕೌಲ್ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2019ರಲ್ಲಿ ಟೀಂ ಇಂಡಿಯಾ ಪರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದ ಸಿದ್ಧಾರ್ಥ್, ಅಂದಿನಿಂದ ಭಾರತ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ.

1 / 7
ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಸಿದ್ಧಾರ್ಥ್ ಕೌಲ್ ನಿವೃತ್ತಿ ಘೋಷಿಸಿದ್ದಾರೆ. ಸಿದ್ಧಾರ್ಥ್ ಟೀಂ ಇಂಡಿಯಾ ಪರ 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿದ್ದು, ಅವರು ಐಪಿಎಲ್‌ನಲ್ಲೂ ಆಡಿದ್ದಾರೆ.

2 / 7
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿದ್ಧಾರ್ಥ್ ಕೌಲ್, ‘ನಾನು ಬಾಲ್ಯದಲ್ಲಿ ಮತ್ತು ಪಂಜಾಬ್‌ನ ಮೈದಾನಗಳಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ದೇಶವನ್ನು ಪ್ರತಿನಿಧಿಸುವ ಕನಸು ಕಂಡಿದ್ದೆ. ದೇವರ ದಯೆಯಿಂದ ಆ ಕನಸು 2018 ರಲ್ಲಿ ನನಸಾಯಿತು.

3 / 7
ಟಿ20 ತಂಡದಲ್ಲಿ ನನ್ನ ಕ್ಯಾಪ್ ಸಂಖ್ಯೆ 75 ಮತ್ತು ಏಕದಿನ ತಂಡದಲ್ಲಿ ನನ್ನ ಕ್ಯಾಪ್ ಸಂಖ್ಯೆ 221 ಆಗಿತ್ತು. ಈಗ ನಾನು ಭಾರತದಲ್ಲಿ ನನ್ನ ವೃತ್ತಿಜೀವನವನ್ನು ಕೊನೆಗೊಳಿಸುವ ಮತ್ತು ನನ್ನ ನಿವೃತ್ತಿಯನ್ನು ಘೋಷಿಸುವ ಸಮಯ ಬಂದಿದೆ ಎಂದು ಬರೆದುಕೊಂಡಿದ್ದಾರೆ.

4 / 7
ಸಿದ್ಧಾರ್ಥ್ ಕೌಲ್ 2018 ರಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಮೊದಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದರು. ಇದರ ನಂತರ, ಅವರು ಅದೇ ವರ್ಷದಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದ್ದರು.

5 / 7
ಸಿದ್ಧಾರ್ಥ್ ಕೌಲ್ ತಮ್ಮ ಏಕದಿನ ವೃತ್ತಿಜೀವನದಲ್ಲಿ ಒಂದೇ ಒಂದು ವಿಕೆಟ್ ಪಡೆದಿಲ್ಲ. ಅದೇ ವೇಳೆ ಟಿ20ಯಲ್ಲಿ ಟೀಂ ಇಂಡಿಯಾ ಪರ 4 ವಿಕೆಟ್ ಕಬಳಿಸಿದ್ದಾರೆ. ಇದಲ್ಲದೆ, ಸಿದ್ಧಾರ್ಥ್ ಕೌಲ್ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಡೇರ್‌ಡೆವಿಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂತಾದ ಫ್ರಾಂಚೈಸಿಗಳ ಭಾಗವಾಗಿದ್ದಾರೆ. ಐಪಿಎಲ್‌ನಲ್ಲಿ 55 ಪಂದ್ಯಗಳನ್ನು ಆಡಿರುವ ಅವರು ಒಟ್ಟು 58 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

6 / 7
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 2008 ರಲ್ಲಿ ಅಂಡರ್-19 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಆಗ ಸಿದ್ಧಾರ್ಥ್ ಕೌಲ್ ಕೂಡ ಆ ತಂಡದ ಭಾಗವಾಗಿದ್ದರು. ಇದಲ್ಲದೇ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಸಿದ್ಧಾರ್ಥ್ ಕೌಲ್ ಸೀನಿಯರ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಇತ್ತೀಚೆಗೆ ಅವರು ರಣಜಿ ಟ್ರೋಫಿಯಲ್ಲೂ ಆಡಿದ್ದರು.

7 / 7
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್