ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಂ ಇಂಡಿಯಾ ಘಾತುಕ ವೇಗಿ

Varun Aaron Retires: ಭಾರತೀಯ ವೇಗದ ಬೌಲರ್ ವರುಣ್ ಆರಾನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವರುಣ್, 9 ಏಕದಿನ ಮತ್ತು 9 ಟೆಸ್ಟ್ ಪಂದ್ಯಗಳಲ್ಲಿ 29 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ನಲ್ಲಿಯೂ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೂ, ಆಗಾಗ್ಗೆ ಗಾಯದಿಂದ ಬಳಲುತ್ತಿದ್ದ ಅವರ ಅಂತರಾಷ್ಟ್ರೀಯ ಕ್ರಿಕೆಟ್​ ಜೀವನ ಬಹಳ ದಿನಗಳವರೆಗೆ ನಡೆಯಲಿಲ್ಲ.

ಪೃಥ್ವಿಶಂಕರ
|

Updated on: Jan 10, 2025 | 3:24 PM

ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾದಲ್ಲಿ ಆಟಗಾರರ ನಿವೃತ್ತಿಯ ಪರ್ವ ಆರಂಭವಾಗಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಅನುಭವಿ ಸ್ಪಿನ್ನರ್ ಆರ್​. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅವರ ಬಳಿಕ ಮತ್ತೊಬ್ಬ ವೇಗಿ ರಿಷಿ ಧವನ್ ಕೂಡ  ಸೀಮಿತ ಓವರ್​ಗಳ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಮತ್ತೊಬ್ಬ ವೇಗದ ಬೌಲರ್ ವರುಣ್ ಆರೋನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

1 / 6
2011 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ವರುಣ್, ಭಾರತದ ಪರ 9 ಏಕದಿನ ಮತ್ತು ಅಷ್ಟೇ ಸಂಖ್ಯೆಯ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಒಟ್ಟು 29 ವಿಕೆಟ್​ಗಳನ್ನು ಪಡೆದಿದ್ದಾರೆ. ತನ್ನ ವೇಗದ ಬೌಲಿಂಗ್ ಮೂಲಕವೇ ಸಂಚಲನ ಮೂಡಿಸಿದ್ದ ವರುಣ್ ಅವರು ಆಗಾಗ್ಗೆ ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಗುಳಿಯುತ್ತಿದ್ದರು.

2 / 6
2010-11ರಲ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದಿದ್ದ ವರುಣ್, ಗಂಟೆಗೆ 153 ಕಿಲೋಮೀಟರ್ ವೇಗದಲ್ಲಿ ಚೆಂಡನ್ನು ಎಸೆಯುವ ಮೂಲಕ ಸಂಚಲನ ಮೂಡಿಸಿದ್ದರು. ಹೀಗಾಗಿ ಬೇಗನೇ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರಾದರೂ ತಂಡದಲ್ಲಿ ಖಾಯಂ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

3 / 6
ಟೀಂ ಇಂಡಿಯಾ ಪರ ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿರುವ ವರುಣ್ ಒಟ್ಟು 11 ವಿಕೆಟ್ ಕಬಳಿಸಿದ್ದರೆ, ಇತ್ತ ಟೆಸ್ಟ್ ಕ್ರಿಕೆಟ್​ನಲ್ಲಿಯೂ 9 ಪಂದ್ಯಗಳನ್ನಾಡಿರುವ ಅವರ ಖಾತೆಯಲ್ಲಿ ಒಟ್ಟು 18 ವಿಕೆಟ್​ಗಳು ಸೇರಿವೆ. ಆದಾಗ್ಯೂ, ದೇಶೀಯ ಕ್ರಿಕೆಟ್‌ನಲ್ಲಿ ವರುಣ್ ಜಾರ್ಖಂಡ್‌ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ.

4 / 6
ವರುಣ್ ಒಟ್ಟು 66 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಒಟ್ಟು 173 ವಿಕೆಟ್ಗಳನ್ನು ಪಡೆದಿದ್ದಾರೆ. ಹಾಗೆಯೇ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ವರುಣ್ 87 ಪಂದ್ಯಗಳಲ್ಲಿ 141 ವಿಕೆಟ್ ಪಡೆದಿದ್ದಾರೆ. ಟಿ-20 ಕ್ರಿಕೆಟ್‌ನಲ್ಲಿಯೂ ಕಮಾಲ್ ಮಾಡಿರುವ ಅವರು ಆಡಿರುವ 95 ಪಂದ್ಯಗಳಲ್ಲಿ ಒಟ್ಟು 93 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 6
ವರುಣ್ ಆರೋನ್ ಐಪಿಎಲ್‌ನಲ್ಲಿ ಹಲವು ತಂಡಗಳ ಪರ ಆಡಿದ್ದಾರೆ. 2011 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಪಾದಾರ್ಪಣೆ ಮಾಡಿದ ಅವರು ಈ ಲೀಗ್​ನಲ್ಲಿ ಒಟ್ಟು 52 ಪಂದ್ಯಗಳನ್ನಾಡಿದ್ದು 44 ವಿಕೆಟ್ ಕಬಳಿಸಿದ್ದಾರೆ. ಆದರೆ, 2022ರ ನಂತರ ವರುಣ್‌ಗೆ ಐಪಿಎಲ್‌ನಲ್ಲಿ ತನ್ನ ಛಾಪು ಮೂಡಿಸುವ ಅವಕಾಶ ಸಿಗಲಿಲ್ಲ. ಈ ಲೀಗ್‌ನಲ್ಲಿ ಅವರು ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಸೇರಿದಂತೆ ಹಲವು ದೊಡ್ಡ ತಂಡಗಳಿಗೆ ಆಡಿದ್ದಾರೆ.

6 / 6
Follow us
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ

ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ

ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ

ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್

ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ

ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ

ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್

ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್

ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ

Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ