- TV9 Kannada Kannada News Photos Cricket Photos Yashasvi Jaiswal and KL Rahul Break Records: Indian Openers Dominate SENA Tests
ಗಂಭೀರ್ ಹಿಂದಿಕ್ಕಿದ ಯಶಸ್ವಿ ಜೈಸ್ವಾಲ್, ಏಷ್ಯಾದ ಆರಂಭಿಕರ ಪಟ್ಟಿಯಲ್ಲಿ ರಾಹುಲ್‌ಗೆ 2ನೇ ಸ್ಥಾನ
ನ್ಯೂಜಿಲೆಂಡ್ ವಿರುದ್ಧ ಯಶಸ್ವಿ ಜೈಸ್ವಾಲ್ 85 ರನ್ ಹಾಗೂ ಕೆಎಲ್ ರಾಹುಲ್ 52* ರನ್ ಗಳಿಸಿ ಮಿಂಚಿದ್ದಾರೆ. ಜೈಸ್ವಾಲ್ SENA ರಾಷ್ಟ್ರಗಳಲ್ಲಿ 8 ಬಾರಿ 50+ ರನ್ ಗಳಿಸಿ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಿದ್ದಾರೆ. ರಾಹುಲ್ ನಾಲ್ಕೂ SENA ದೇಶಗಳಲ್ಲಿ ಅರ್ಧಶತಕ ಗಳಿಸಿದ ಮೊದಲ ಭಾರತೀಯ ಆರಂಭಿಕ ಆಟಗಾರರಾಗಿ ದಾಖಲೆ ಬರೆದಿದ್ದಾರೆ. ಇಬ್ಬರೂ SENA ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಬ್ಯಾಟಿಂಗ್ ಪ್ರಾಬಲ್ಯವನ್ನು ಎತ್ತಿ ಹಿಡಿದಿದ್ದಾರೆ.
Updated on: Nov 20, 2026 | 6:35 PM

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 85 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಅವರು SENA ರಾಷ್ಟ್ರಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಿದ್ದಾರೆ(PC-PTI).

ನ್ಯೂಜಿಲೆಂಡ್ ವಿರುದ್ಧ 85 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದ ಯಶಸ್ವಿ ಜೈಸ್ವಾಲ್, SENA ರಾಷ್ಟ್ರಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಜೈಸ್ವಾಲ್ ಈ ಸಾಧನೆಯನ್ನು 8ನೇ ಬಾರಿ ಮಾಡಿದ್ದಾರೆ. ಈ ಹಿಂದೆ ಗೌತಮ್ ಗಂಭೀರ್ 7 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದರು. ಇದೀಗ ಗಂಭೀರ್ ಅವರನ್ನು ಹಿಂದಿಕ್ಕುವಲ್ಲಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ(PC-PTI).

ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಸುನಿಲ್ ಗವಾಸ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಅವರು SENA ರಾಷ್ಟ್ರಗಳಲ್ಲಿ 19 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇನ್ನು ವೀರೇಂದ್ರ ಸೆಹ್ವಾಗ್ ಕೂಡ ಈ ಪಟ್ಟಿಯಲ್ಲಿ ಪ್ರಮುಖ ಸ್ಥಾನದಲ್ಲಿದ್ದಾರೆ(PC-PTI).

ಮತ್ತೊಂದೆಡೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮೊದಲ ದಿನದಾಟದ ಅಂತ್ಯಕ್ಕೆ 52 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಈ ಅರ್ಧಶತಕದ ಮೂಲಕ ಅವರು SENA ರಾಷ್ಟ್ರಗಳ ನಾಲ್ಕೂ ದೇಶಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅರ್ಧಶತಕ ಗಳಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎಂಬ ವಿಶೇಷ ಸಾಧನೆ ಮಾಡಿದ್ದಾರೆ(PC-PTI).

ಅಷ್ಟೇ ಅಲ್ಲ, ಕೆಎಲ್ ರಾಹುಲ್ ಮತ್ತೊಂದು ಮಹತ್ವದ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. SENA ರಾಷ್ಟ್ರಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಏಷ್ಯಾದ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಶ್ರೀಲಂಕಾದ ದಿಮುತ್ ಕರುಣರತ್ನೆ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ(PC-PTI).

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



