- Kannada News Photo gallery Cricket photos Indian Openers KL Rahul and Yashasvi Jaiswal Creates History In Australia
ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ಕೆಎಲ್ ರಾಹುಲ್ – ಯಶಸ್ವಿ ಜೈಸ್ವಾಲ್
KL Rahul and Yashasvi Jaiswal: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಲೆಜೆಂಡ್ ಸುನಿಲ್ ಗವಾಸ್ಕರ್ - ಕ್ರಿಸ್ ಶ್ರೀಕಾಂತ್ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
Updated on: Nov 24, 2024 | 8:31 AM

ಪರ್ತ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಭಾರತ ತಂಡದ ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್ಗೆ 201 ರನ್ಗಳ ಜೊತೆಯಾಟವಾಡಿದ್ದಾರೆ. ಈ ಪಾಲುದಾರಿಕೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ನಲ್ಲಿ ದ್ವಿಶತಕದ ಜೊತೆಯಾಟವಾಡಿದ ಭಾರತದ ಮೊದಲ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕ್ರಿಸ್ ಶ್ರೀಕಾಂತ್ ಹೆಸರಿನಲ್ಲಿತ್ತು. 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.

ಇದೀಗ 38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 150 ರನ್ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 104 ರನ್ಗಳಿಗೆ ಸರ್ವಪತನ ಕಂಡಿತು. 46 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಕೆಎಲ್ ರಾಹುಲ್ (77) ವಿಕೆಟ್ ಕಳೆದುಕೊಂಡು 202 ರನ್ (64 ಓವರ್ಗಳು) ಕಲೆಹಾಕಿದೆ.
