ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ಕೆಎಲ್ ರಾಹುಲ್ – ಯಶಸ್ವಿ ಜೈಸ್ವಾಲ್

|

Updated on: Nov 24, 2024 | 8:31 AM

KL Rahul and Yashasvi Jaiswal: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಲೆಜೆಂಡ್ ಸುನಿಲ್ ಗವಾಸ್ಕರ್ - ಕ್ರಿಸ್ ಶ್ರೀಕಾಂತ್ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ಭಾರತ ತಂಡದ ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

2 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿದ್ದಾರೆ. ಈ ಪಾಲುದಾರಿಕೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ದ್ವಿಶತಕದ ಜೊತೆಯಾಟವಾಡಿದ ಭಾರತದ ಮೊದಲ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕ್ರಿಸ್ ಶ್ರೀಕಾಂತ್ ಹೆಸರಿನಲ್ಲಿತ್ತು. 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್​ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.

4 / 5
ಇದೀಗ 38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

5 / 5
ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 150 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 104 ರನ್​ಗಳಿಗೆ ಸರ್ವಪತನ ಕಂಡಿತು. 46 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಕೆಎಲ್ ರಾಹುಲ್ (77) ವಿಕೆಟ್ ಕಳೆದುಕೊಂಡು 202 ರನ್​ (64 ಓವರ್​ಗಳು) ಕಲೆಹಾಕಿದೆ.