IND vs WI Test: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ನಲ್ಲಿ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ ಭಾರತದ ಈ 4 ಆಟಗಾರರು
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ಅಂತೆಯೆ ವಿಂಡೀಸ್ ವಿರುದ್ಧದ ಟೆಸ್ಟ್ ಸಂದರ್ಭ ಭಾರತದ ಈ 4 ಆಟಗಾರರು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.
1 / 7
ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಕೆರಿಬಿಯನ್ನರ ನಾಡಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಇದು ಜುಲೈ 12ಕ್ಕೆ ಆರಂಭವಾಗಲಿದ್ದು, ಮೊದಲ ಟೆಸ್ಟ್ ಡೊಮಿನಿಕಾದಲ್ಲಿ ನಡೆದರೆ, ದ್ವಿತೀಯ ಟೆಸ್ಟ್ ಜುಲೈ 20 ರಿಂದ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ಆಯೋಜಿಸಲಾಗಿದೆ.
2 / 7
ಈ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟ ಕೂಡ ಮಾಡಿದೆ. ಇದರಲ್ಲಿ ಕೆಲ ಅಚ್ಚರಿಯ ಬೆಳವಣಿಗೆಗಳು ನಡೆದಿದ್ದು, ಚೇತೇಶ್ವರ್ ಪೂಜಾರ, ಉಮೇಶ್ ಯಾದವ್ರಂತಹ ಹಿರಿಯ ಆಟಗಾರರನ್ನು ಕೈಬಿಡಲಾಗಿದೆ.
3 / 7
ಇವರ ಬದಲು ಕೆಲ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ನವ್ದೀಪ್ ಸೈನಿ ಅನೇಕ ಸಮಯದ ಬಳಿಕ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅಂತೆಯೆ ವಿಂಡೀಸ್ ವಿರುದ್ಧದ ಟೆಸ್ಟ್ ಸಂದರ್ಭ ಭಾರತದ ಈ 4 ಆಟಗಾರರು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.
4 / 7
ಯಶಸ್ವಿ ಜೈಸ್ವಾಲ್: 21 ವರ್ಷ ಪ್ರಯಾದ ಯಶಸ್ವಿ ಜೈಸ್ವಾಲ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಪ್ರಥಮ ಟೆಸ್ಟ್ನಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ಹೊಂದಿದ್ದಾರೆ. ಇವರು ಈ ಬಾರಿಯ ಐಪಿಎಲ್ನಲ್ಲಿ ಆಡಿದ 14 ಪಂದ್ಯಗಳಲ್ಲಿ 625 ರನ್ ಸಿಡಿಸಿದ್ದರು. ಒಂದು ಶತಕ ಕೂಡ ಬಂದಿದೆ.
5 / 7
ರುತುರಾಜ್ ಗಾಯಕ್ವಾಡ್: ಇಲ್ಲಿಯವರೆಗೆ ಟೀಮ್ ಇಂಡಿಯಾ ಪರ ಒಂದು ODI ಮತ್ತು 9 T20I ಪಂದ್ಯಗಳನ್ನು ಆಡಿರುವ ರುತುರಾಜ್ ಗಾಯಕ್ವಾಡ್ ಅವರು ತಮ್ಮ ಮೊದಲ ಟೆಸ್ಟ್ ಆಡಲು ಸಜ್ಜಾಗಿದ್ದಾರೆ. ಇವರು ಪೂಜಾರ ಸ್ಥಾನ ತುಂಬಲಿದ್ದಾರೆ ಎನ್ನಲಾಗಿದೆ. 26 ವರ್ಷದ ಬಲಗೈ ಬ್ಯಾಟರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 42.19 ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ.
6 / 7
ಇಶಾನ್ ಕಿಶನ್: ಇಶಾನ್ ಕಿಶನ್ 2023 ರ ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023 ಫೈನಲ್‌ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ. ಆದರೀಗ ಕೆಎಸ್ ಭರತ್ ನಿರೀಕ್ಷೆಗೆ ತಕ್ಕಂತೆ ಆಡುತ್ತಿಲ್ಲ. ಹೀಗಾಗಿ ಇಶಾನ್ ಮೊದಲ ಟೆಸ್ಟ್ನಲ್ಲಿ ಆಡುವ ಸಾಧ್ಯತೆ ಇದೆ.
7 / 7
ಮುಕೇಶ್ ಕುಮಾರ್: ಮುಖೇಶ್ ಕುಮಾರ್ ಕೂಡ ಟೀಮ್ ಇಂಡಿಯಾ ಪರ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲು ಕಾಯುತ್ತಿದ್ದಾರೆ. ಅವರು ಈ ಮೊದಲು ODI ಮತ್ತು T20I ತಂಡದ ಭಾಗವಾಗಿದ್ದರು. ಆದರೆ ಪ್ಲೇಯಿಂಗ್ XI ನಲ್ಲಿ ಕಾಣಿಸಿಕೊಳ್ಳುವ ಅವಕಾಶವನ್ನು ಪಡೆದುಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪರ ಮಾರಕ ದಾಳಿ ಸಂಘಟಿಸಲು ಸಜ್ಜಾಗುತ್ತಿದ್ದಾರೆ.