AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

South Africa vs India: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Nov 14, 2024 | 7:31 AM

Share
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ಸ್​ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್​ ಕಲೆಹಾಕಿತು.

1 / 5
ಈ 219 ರನ್​ಗಳೊಂದಿಗೆ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಅದು ಕೂಡ ಜಪಾನ್ ದೇಶದ ವರ್ಲ್ಡ್​ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ 200 ಪ್ಲಸ್ ಸ್ಕೋರ್​ಗಳಿಸಿದ ವಿಶ್ವ ದಾಖಲೆಯೊಂದು ಜಪಾನ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಜಪಾನ್ ತಂಡವು ಒಟ್ಟು 7 ಬಾರಿ 200+ ಸ್ಕೋರ್​ಗಳಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದೆ. ಇದೀಗ ಈ ದಾಖಲೆಯನ್ನು ಭಾರತೀಯರು ಮುರಿದಿದ್ದಾರೆ.

3 / 5
2024 ರಲ್ಲಿ ಟೀಮ್ ಇಂಡಿಯಾ ಒಟ್ಟು 8 ಬಾರಿ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್​ಗಳಿಸಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಹೊಸ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 219 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆತಿಥೇಯ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 208 ರನ್​ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 11 ರನ್​ಗಳ ರೋಚಕ ಜಯ ಸಾಧಿಸಿ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು

ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ

ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ

ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ

BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ

ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ

ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ