- Kannada News Photo gallery Cricket photos Indian team gears up for Test match vs Bangladesh in Photos
ಟೆಸ್ಟ್ ಜೆರ್ಸಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿಂಗ್: ಇಲ್ಲಿದೆ ಫೋಟೋಸ್
India vs Bangladesh Test: ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. ಮೊದಲ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದರೆ, ಎರಡನೇ ಮ್ಯಾಚ್ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಜರುಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಭಾಗವಾಗಿರುವ ಈ ಪಂದ್ಯಗಳು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು.
Updated on: Sep 18, 2024 | 9:00 AM

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಸಕಲ ರೀತಿಯಲ್ಲೂ ಸಜ್ಜಾಗಿ ನಿಂತಿದೆ. ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ಶುರುವಾಗಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಫೋಟೋಶೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಮಾರ್ಚ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಇದೀಗ ಟೀಮ್ ಇಂಡಿಯಾ ಆಟಗಾರರು ಮತ್ತೆ ವೈಟ್ ಜೆರ್ಸಿಯಲ್ಲಿ ಮಿಂಚಿದ್ದಾರೆ. ಈ ಫೋಟೋ ಸೆಷನ್ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ಕಾಣಿಸಿಕೊಂಡಿದ್ದರು.

ಇನ್ನು ಗುರುವಾರದಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಈಗಾಗಲೇ ಟೆಸ್ಟ್ ಜೆರ್ಸಿಯಲ್ಲಿ ಮಿಂಚಿರುವ ದಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಹಾಗೆಯೇ ಶುಭ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡುವುದು ನಿಶ್ಚಿತ. ಏಕೆಂದರೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ಗಿಲ್ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್ರೌಂಡರ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಆಡುವ ಬಳಗದಲ್ಲಿರಲಿದ್ದಾರೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್. (ALL PC- Twitter)
























