ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಎರಡು ತಂಡಗಳಾದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಕಾಳಗಕ್ಕೆ ಒಂದು ದಿನವಷ್ಟೆ ಬಾಕಿಯಿದೆ. ಈಗಾಗಲೇ ಕಿವೀಸ್ ನಾಡಿಗೆ ಟೀಮ್ ಇಂಡಿಯಾ ತಲುಪಿದ್ದು, ಅಭ್ಯಾಸ ಕೂಡ ಶುರು ಮಾಡಿದೆ.
ಭಾರತ- ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿ ಆಯೋಜಿಸಲಾಗಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡ ಕಿವೀಸ್ ನಾಡಿನ ವಾತಾವರಣಕ್ಕೆ ಹೊಂದಿಕೊಳ್ಳಬೇಕಿದೆ.
ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಉತ್ಸಾಹಿ ತರುಣರೇ ಇರುವ ಭಾರತ ತಂಡ 3 ಪಂದ್ಯಗಳ ಟಿ20 ಪಂದ್ಯವನ್ನಾಡಲಿದೆ.
ಟಿ20 ಸರಣಿಯನ್ನು ಹಾರ್ದಿಕ್ ಪಾಂಡ್ಯ ನಾಯಕನಾಗಿ ಮುನ್ನಡೆಸಲಿದ್ದಾರೆ. ಶಿಖರ್ ಧವನ್ ಏಕದಿನ ಸರಣಿಗೆ ಕ್ಯಾಪ್ಟನ್ ಆಗಿದ್ದಾರೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅವರಿಗೆ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ.
ಭಾರತ ನವೆಂಬರ್ 18 ರಿಂದ ಕಿವೀಸ್ ತಂಡವನ್ನು ಎದುರಿಸಲಿದೆ. ವೆಲ್ಲಿಂಗ್ಟನ್ನಲ್ಲಿ ಮೊದಲ ಪಂದ್ಯ ನಡೆಯಲಿದೆ. ಮೂರು ಟಿ20 ಪಂದ್ಯಗಳ ಸರಣಿಯ ಬಳಿಕ 3 ಪಂದ್ಯಗಳ ಶಿಖರ್ ಧವನ್ ನೇತೃತ್ವದಲ್ಲಿ ಏಕದಿನ ಸರಣಿಯನ್ನಾಡಲಿದೆ.
ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
ಬೌಲಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಅರ್ಶ್ದೀಪ್ ಸಿಂಗ್.
ಅಭ್ಯಾಸದ ಬಳಿಕ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ಅರ್ಶ್ದೀಪ್, ಭುವನೇಶ್ವರ್ ಕುಮಾರ್ ಮತ್ತು ಇಶಾನ್ ಕಿಶನ್.
Published On - 7:50 am, Thu, 17 November 22