IND vs NZ: ನಾಳೆ ಮೊದಲ ಟಿ20: ವೆಲ್ಲಿಂಗ್ಟನ್ನಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ
TV9 Web | Updated By: Vinay Bhat
Updated on:
Nov 17, 2022 | 7:50 AM
India vs New Zealand: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಎರಡು ತಂಡಗಳಾದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಕಾಳಗಕ್ಕೆ ಒಂದು ದಿನವಷ್ಟೆ ಬಾಕಿಯಿದೆ. ಈಗಾಗಲೇ ಕಿವೀಸ್ ನಾಡಿಗೆ ಟೀಮ್ ಇಂಡಿಯಾ ತಲುಪಿದ್ದು, ಅಭ್ಯಾಸ ಕೂಡ ಶುರು ಮಾಡಿದೆ.
1 / 8
ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಎರಡು ತಂಡಗಳಾದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಕಾಳಗಕ್ಕೆ ಒಂದು ದಿನವಷ್ಟೆ ಬಾಕಿಯಿದೆ. ಈಗಾಗಲೇ ಕಿವೀಸ್ ನಾಡಿಗೆ ಟೀಮ್ ಇಂಡಿಯಾ ತಲುಪಿದ್ದು, ಅಭ್ಯಾಸ ಕೂಡ ಶುರು ಮಾಡಿದೆ.
2 / 8
ಭಾರತ- ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿ ಆಯೋಜಿಸಲಾಗಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡ ಕಿವೀಸ್ ನಾಡಿನ ವಾತಾವರಣಕ್ಕೆ ಹೊಂದಿಕೊಳ್ಳಬೇಕಿದೆ.
3 / 8
ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಉತ್ಸಾಹಿ ತರುಣರೇ ಇರುವ ಭಾರತ ತಂಡ 3 ಪಂದ್ಯಗಳ ಟಿ20 ಪಂದ್ಯವನ್ನಾಡಲಿದೆ.
4 / 8
ಟಿ20 ಸರಣಿಯನ್ನು ಹಾರ್ದಿಕ್ ಪಾಂಡ್ಯ ನಾಯಕನಾಗಿ ಮುನ್ನಡೆಸಲಿದ್ದಾರೆ. ಶಿಖರ್ ಧವನ್ ಏಕದಿನ ಸರಣಿಗೆ ಕ್ಯಾಪ್ಟನ್ ಆಗಿದ್ದಾರೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅವರಿಗೆ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ.
5 / 8
ಭಾರತ ನವೆಂಬರ್ 18 ರಿಂದ ಕಿವೀಸ್ ತಂಡವನ್ನು ಎದುರಿಸಲಿದೆ. ವೆಲ್ಲಿಂಗ್ಟನ್ನಲ್ಲಿ ಮೊದಲ ಪಂದ್ಯ ನಡೆಯಲಿದೆ. ಮೂರು ಟಿ20 ಪಂದ್ಯಗಳ ಸರಣಿಯ ಬಳಿಕ 3 ಪಂದ್ಯಗಳ ಶಿಖರ್ ಧವನ್ ನೇತೃತ್ವದಲ್ಲಿ ಏಕದಿನ ಸರಣಿಯನ್ನಾಡಲಿದೆ.
6 / 8
ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
7 / 8
ಬೌಲಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಅರ್ಶ್ದೀಪ್ ಸಿಂಗ್.
8 / 8
ಅಭ್ಯಾಸದ ಬಳಿಕ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ಅರ್ಶ್ದೀಪ್, ಭುವನೇಶ್ವರ್ ಕುಮಾರ್ ಮತ್ತು ಇಶಾನ್ ಕಿಶನ್.
Published On - 7:50 am, Thu, 17 November 22