ಸೋಮವಾರ ಏಷ್ಯಾಕಪ್​ಗೆ ಭಾರತ ತಂಡ ಪ್ರಕಟ: ರಾಹುಲ್ ಪಾಸ್: ಅಯ್ಯರ್​ಗೆ ಅಗ್ನಿಪರೀಕ್ಷೆ

|

Updated on: Aug 19, 2023 | 10:25 AM

India Squad for Asia Cup: ಏಷ್ಯಾಕಪ್ 2023 ಕ್ಕೆ ಭಾರತ ಕ್ರಿಕೆಟ್ ತಂಡ ಸೋಮವಾರ (ಆ. 21) ದಂದು ಬಿಸಿಸಿಐ ಸಭೆ ನಡೆಸಿ ಪ್ರಕಟ ಮಾಡಲಿದೆ ಎಂದು ಹೇಳಲಾಗಿದೆ. ಈಗಾಗಲೇ ಕೆಎಲ್ ರಾಹುಲ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಹೇಳಲಾಗಿದೆ. ಆದರೆ, ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಶೇ. 100 ರಷ್ಟಿಲ್ಲವಂತೆ.

1 / 8
ಬಹುನಿರೀಕ್ಷಿತ ಏಷ್ಯಾಕಪ್ 2023 ಟೂರ್ನಿಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 30 ರಂದು ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದೆ. ಆದರೆ, ಏಷ್ಯಾಕಪ್​ಗೆ ಭಾರತ ತಂಡ ಮಾತ್ರ ಇನ್ನೂ ಪ್ರಕಟವಾಗಿಲ್ಲ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾ ಪ್ಲೇಯರ್ಸ್ ಅನ್ನು ಹೆಸರಿಸಿಲ್ಲ.

2 / 8
ಈ ವಾರದ ಆರಂಭದಲ್ಲಿ ಭಾರತ ತಂಡದ ಘೋಷಣೆಗೆ ಬಿಸಿಸಿಐ ಸಭೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್​ಗಾಗಿ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಕೆಲ ದಿನ ಕಾದು ನಂತರ ತಂಡವನ್ನು ಪ್ರಕಟಿಸುವ ತೀರ್ಮಾನಕ್ಕೆ ಬಂತು.

3 / 8
ಇದೀಗ ಸೋಮವಾರ (ಆ. 21) ದಂದು ಬಿಸಿಸಿಐ ಸಭೆ ನಡೆಸಿ ತಂಡವನ್ನು ಪ್ರಕಟ ಮಾಡಲಿದೆ ಎಂದು ಹೇಳಲಾಗಿದೆ. ಇದಕ್ಕೂ ಮುನ್ನ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಟೆಸ್ಟ್ ನಡೆಯುವ ಸಾಧ್ಯತೆ ಇದೆ. ಆದರೆ, ಪಿಟಿಐ ಮಾಡಿರುವ ವರದಿಯ ಪ್ರಕಾರ ರಾಹುಲ್ ಫಿಟ್ ಆಗಿದ್ದು, ಏಷ್ಯಾಕಪ್​ ತಂಡದಲ್ಲಿ ಇರಲಿದ್ದಾರಂತೆ.

4 / 8
ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಅಭ್ಯಾಸ ಪಂದ್ಯಗಳನ್ನು ಆಡುತ್ತಿದ್ದಾರೆ. ಸಂಪೂರ್ಣ ಚೇತರಿಕೆಯತ್ತ ಮುಖಮಾಡಿದ್ದಾರೆ. ಶೇ. 100 ರಷ್ಟು ಫಿಟ್ ಆಗಿದ್ದರೆ, ಇಬ್ಬರೂ ಆಟಗಾರರು ಏಷ್ಯಾಕಪ್​ಗೆ ಆಯ್ಕೆಯಾಗುತ್ತಾರೆ. ಹೀಗಾಗಿ ಇವರಿಬ್ಬರ ಫಿಟ್ನೆಸ್ ಟೆಸ್ಟ್ ನಡೆಯಬೇಕಿದೆ.

5 / 8
ರಾಹುಲ್ ಅವರು ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪ್ರಮುಖ ವಿಕೆಟ್‌ಕೀಪರ್ ಆಗಿದ್ದು, ವಿಶ್ವಕಪ್‌ನಲ್ಲಿ ಕಣಕ್ಕಿಳಿಯಬೇಕಿದೆ. 4ನೇ ಕ್ರಮಾಂಕದಲ್ಲಿ ತೊಂದರೆ ಅನುಭವಿಸುತ್ತಿರುವ ಟೀಮ್ ಇಂಡಿಯಾಕ್ಕೆ ಅಯ್ಯರ್‌ ಅಗತ್ಯತೆ ತುಂಬಾ ಇದೆ. ಹೀಗಾಗಿ ಇವರಿಬ್ಬರು ಫಿಟ್ ಆಗಿ ತಂಡಕ್ಕೆ ಮರಳುವುದು ಮುಖ್ಯವಾಗಿದೆ.

6 / 8
ಐಪಿಎಲ್ 2023 ರ ಸಂದರ್ಭದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಕೆಎಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಿಂದ ಹೊರನಡೆಯಬೇಕಾಯಿತು. ಅತ್ತ ಅಯ್ಯರ್ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ ಬೆನ್ನುನೋವಿಗೆ ತುತ್ತಾಗಿದ್ದರು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಐಪಿಎಲ್ 2023 ರಿಂದ ಹೊರನಡೆಯಬೇಕಾಯಿತು.

7 / 8
ಏಷ್ಯಾಕಪ್ 2023 ರಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಉಪ ನಾಯಕನಾಗಿದ್ದಾರೆ. ಆಗಸ್ಟ್ 30 ರಂದು ಏಷ್ಯಾಕಪ್​ಗೆ ಚಾಲನೆ ಸಿಗಲಿದೆ. ಸೆಪ್ಟೆಂಬರ್ 2 ರಂದು ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ಏಷ್ಯಾಕಪ್ ಬಳಿಕ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ನಡೆಯಲಿದೆ.

8 / 8
ಏಷ್ಯಾಕಪ್ 2023ಕ್ಕೆ ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್.