Updated on: Jun 28, 2023 | 10:58 PM
ODI World Cup 2023: ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಶುರುವಾಗಲಿದೆ. ಆದರೆ ಭಾರತ ತಂಡವು ತನ್ನ ಅಭಿಯಾನ ಆರಂಭಿಸಲಿರುವುದು ಅಕ್ಟೋಬರ್ 8 ರಂದು. ಇಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ.
ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ನಾಕೌಟ್ ಹಂತದಲ್ಲಿ ಎದುರು ಬದುರಾಗುವ ಉಭಯ ತಂಡಗಳು ಈ ಬಾರಿ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯುತ್ತಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು.
ಅಂದರೆ ಚೆಪಾಕ್ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯಾ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದೇ ವೇಳೆ ಆಸ್ಟ್ರೇಲಿಯಾ ತಂಡ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು 2 ಬಾರಿ ಸೋಲಿಸಿದೆ. ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.
ಇನ್ನು ಉಭಯ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಒಟ್ಟು 146 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 82 ಬಾರಿ ಸೋಲುಣಿಸಿದೆ. ಅದೇ ಭಾರತ ತಂಡ ಗೆದ್ದಿರುವುದು ಕೇವಲ 54 ಬಾರಿ ಮಾತ್ರ. ಇನ್ನು 10 ಪಂದ್ಯಗಳು ನಿರ್ದಿಷ್ಟ ಕಾರಣಗಳಿಂದಾಗಿ ರದ್ದಾಗಿತ್ತು.
ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್ನಲ್ಲಿ ಭಾರತದ ಮೇಲೆ ಆಸ್ಟ್ರೇಲಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.
ಹಾಗೆಯೇ ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಇದರಲ್ಲಿ ಒಂದು ಪಂದ್ಯ ಗೆದ್ದಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.
ಈ ಎಲ್ಲಾ ಕಾರಣಗಳಿಂದಾಗಿ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾ ತಂಡದಿಂದ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.