ICC World Cup 2023: ಅಜೇಯ ಓಟ; ಈ ವಿಶ್ವಕಪ್‌ನಲ್ಲಿ ಭಾರತದ ಫೈನಲ್ ಪ್ರಯಾಣ ಹೇಗಿತ್ತು ಗೊತ್ತಾ?
ICC World Cup 2023: 2023ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸುವುದರೊಂದಿಗೆ ಆಡಿರುವ ಹತ್ತೂ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಟೀಂ ಇಂಡಿಯಾ ಬರೆದಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್ಗೇರಿದೆ. ಇನ್ನು ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪಯಣವನ್ನು ನೋಡುವುದಾದರೆ..
1 / 11
2023ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸುವುದರೊಂದಿಗೆ ಆಡಿರುವ ಹತ್ತೂ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಟೀಂ ಇಂಡಿಯಾ ಬರೆದಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್ಗೇರಿದೆ. ಇನ್ನು ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪಯಣವನ್ನು ನೋಡುವುದಾದರೆ..
2 / 11
ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಿತ್ತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಭಾರತದ ಬೌಲರ್‌ಗಳು ಆಸ್ಟ್ರೇಲಿಯಾವನ್ನು 199 ರನ್‌ಗಳಿಗೆ ಸೀಮಿತಗೊಳಿಸಿದರು. ಆದರೆ ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ತಂಡದ ಪ್ರಮುಖ ಮೂವರು ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಔಟಾದರು. ಆದರೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅದ್ಭುತ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
3 / 11
ಭಾರತದ ಎರಡನೇ ಪಂದ್ಯ ಅಫ್ಘಾನಿಸ್ತಾನ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು. ಈ ಸವಾಲನ್ನು ಟೀಂ ಇಂಡಿಯಾ 35 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 84 ಎಸೆತಗಳಲ್ಲಿ 131 ರನ್ ಗಳಿಸಿದರು.
4 / 11
ಭಾರತದ ಮೂರನೇ ಪಂದ್ಯ ಪಾಕಿಸ್ತಾನದ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿ ಪಾಕಿಸ್ತಾನವನ್ನು 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟ್ ಮಾಡಿತು. ಪಾಕಿಸ್ತಾನ ನೀಡಿದ ಸವಾಲನ್ನು ಟೀಂ ಇಂಡಿಯಾ 30.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಇದರಲ್ಲಿ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಉತ್ತಮವಾಗಿ ಆಡಿದರು.
5 / 11
ಭಾರತದ ನಾಲ್ಕನೇ ಪಂದ್ಯ ಬಾಂಗ್ಲಾದೇಶದ ವಿರುದ್ಧವಾಗಿತ್ತು. ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಬಾಂಗ್ಲಾದೇಶ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ಈ ಸವಾಲನ್ನು ಭಾರತ 41.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ತಂಡದ ಪರ ವಿರಾಟ್ ಕೊಹ್ಲಿ ಔಟಾಗದೆ 103, ಶುಭಮನ್ ಗಿಲ್ 53 ಮತ್ತು ರೋಹಿತ್ ಶರ್ಮಾ 48 ರನ್ ಬಾರಿಸಿದರು.
6 / 11
ಭಾರತದ ಐದನೇ ಪಂದ್ಯ ನ್ಯೂಜಿಲೆಂಡ್ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 273 ರನ್ ಕಲೆಹಾಕಿತು. ಈ ಸವಾಲನ್ನು ಟೀಂ ಇಂಡಿಯಾ 48ನೇ ಓವರ್‌ನಲ್ಲಿ 6 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 95, ರೋಹಿತ್ ಶರ್ಮಾ 46 ಮತ್ತು ರವೀಂದ್ರ ಜಡೇಜಾ 39 ರನ್ ಗಳಿಸಿದರು.
7 / 11
ಭಾರತದ ಆರನೇ ಪಂದ್ಯ ಇಂಗ್ಲೆಂಡ್ ವಿರುದ್ಧವಾಗಿತ್ತು. ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತು. ಆದರೆ ಇಂಗ್ಲೆಂಡ್ ತಂಡ 34.5 ಓವರ್‌ಗಳಲ್ಲಿ 129 ರನ್‌ಗಳಿಗೆ ಆಲೌಟ್ ಆಯಿತು. ಶಮಿ 4, ಬುಮ್ರಾ 3 ಮತ್ತು ಕುಲದೀಪ್ 2 ವಿಕೆಟ್ ಪಡೆದರು.
8 / 11
ಭಾರತದ ಏಳನೇ ಪಂದ್ಯ ಶ್ರೀಲಂಕಾ ವಿರುದ್ಧವಾಗಿತ್ತು. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಟೀಂ ಇಂಡಿಯಾ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತು. ಆದರೆ ಶ್ರೀಲಂಕಾ ತಂಡ 19.4 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 55 ರನ್ ಗಳಿಸಲಷ್ಟೇ ಶಕ್ತವಾಯಿತು.
9 / 11
ಭಾರತದ ಎಂಟನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 83 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತದ ರವೀಂದ್ರ ಜಡೇಜಾ 5, ಕುಲ್ದೀಪ್ 2 ಹಾಗೂ ಶಮಿ 2 ವಿಕೆಟ್ ಪಡೆದರು.
10 / 11
ಭಾರತದ ಒಂಬತ್ತನೇ ಮತ್ತು ಅಂತಿಮ ಪಂದ್ಯವು ನೆದರ್ಲೆಂಡ್ಸ್ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿತು. 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಕಲೆಹಾಕಿತು. ಅಲ್ಲದೆ ನೆದರ್ಲೆಂಡ್ಸ್ ತಂಡವನ್ನು 47.5 ಓವರ್‌ಗಳಲ್ಲಿ 250 ರನ್‌ಗಳಿಗೆ ಆಲೌಟ್ ಮಾಡಿತು.
11 / 11
ಸೆಮಿಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಆಡಿತ್ತು. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತು. 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 48.5 ಓವರ್‌ಗಳಲ್ಲಿ 327 ರನ್ ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ನ್ಯೂಜಿಲೆಂಡ್ 70 ರನ್ಗಳಿಂದ ಸೋಲೊಪ್ಪಿಕೊಂಡಿತು.