ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು, ಹೀಗಾಗಿ ಈ ವಾರದೊಳಗೆ ಎಲ್ಲಾ ತಂಡಗಳು ಪ್ರಕಟಗೊಳ್ಳಲಿದೆ. ಇತ್ತ ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವವರು ಯಾರು ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.
ಅದರಲ್ಲೂ ಕಳೆದ ಬಾರಿ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿದಿದ್ದ ಆಟಗಾರರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡುವುದು ಖಚಿತ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಾಗಿ ಏಕದಿನ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನೇ ಚಾಂಪಿಯನ್ಸ್ ಟ್ರೋಫಿಗೂ ಪರಿಗಣಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಬಳಗ ಈ ಕೆಳಗಿನಂತಿರಲಿದೆ....
ಬ್ಯಾಟರ್ಗಳು: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್).
ಆಲ್ರೌಂಡರ್ಗಳು: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.
ವೇಗದ ಬೌಲರ್ಗಳು: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ. ಇವರೊಂದಿಗೆ ಹೆಚ್ಚುವರಿ ಬೌಲರ್ಗಳನ್ನು ಮೀಸಲು ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.
ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.