ಹರ್ಷಿತ್ ರಾಣಾಗೆ ಮತ್ತೊಮ್ಮೆ ಚಾನ್ಸ್: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್ಗಳ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.
Updated on: Nov 01, 2025 | 2:23 PM

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ ಮೂರನೇ ಟಿ20 ಪಂದ್ಯ ನಾಳೆ (ನವೆಂಬರ್ 2) ನಡೆಯಲಿದೆ. ಹೋಬರ್ಟ್ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ.

ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಕುಲ್ದೀಪ್ ಯಾದವ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಎಂಸಿಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕುಲ್ದೀಪ್ 2 ವಿಕೆಟ್ ಪಡೆದರೂ 20 ಎಸೆತಗಳಲ್ಲಿ ಬರೋಬ್ಬರಿ 45 ರನ್ ನೀಡಿದ್ದರು. ಹೀಗಾಗಿ ಮೂರನೇ ಪಂದ್ಯದಿಂದ ಹಿರಿಯ ಸ್ಪಿನ್ನರ್ನನ್ನು ಕೈ ಬಿಡುವ ಸಾಧ್ಯತೆಯಿದೆ.

ಇನ್ನು ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇದಾಗ್ಯೂ ಹರ್ಷಿತ್ ರಾಣಾಗೆ ಮತ್ತೊಂದು ಚಾನ್ಸ್ ನೀಡಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಹರ್ಷಿತ್ ಬೌಲಿಂಗ್ನಲ್ಲಿ ವಿಫಲನಾದರೂ, ಬ್ಯಾಟಿಂಗ್ನಲ್ಲಿ 35 ರನ್ಗಳ ಕೊಡುಗೆ ನೀಡಿದ್ದರು.

ಹೀಗಾಗಿ ಮೂರನೇ ಪಂದ್ಯದಲ್ಲೂ ಹರ್ಷಿತ್ ರಾಣಾ ಅವರನ್ನು ಆಲ್ರೌಂಡರ್ ಆಗಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಹೋಬಾರ್ಟ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ ಭಾರತ ತಂಡ ಹೀಗಿರಲಿದೆ...

ಶುಭ್ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.




