AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷಿತ್​ ರಾಣಾಗೆ ಮತ್ತೊಮ್ಮೆ ಚಾನ್ಸ್​: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Nov 01, 2025 | 2:23 PM

Share
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ ಮೂರನೇ ಟಿ20 ಪಂದ್ಯ ನಾಳೆ (ನವೆಂಬರ್ 2) ನಡೆಯಲಿದೆ. ಹೋಬರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ. 

1 / 6
ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಕುಲ್ದೀಪ್ ಯಾದವ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಎಂಸಿಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕುಲ್ದೀಪ್ 2 ವಿಕೆಟ್ ಪಡೆದರೂ 20 ಎಸೆತಗಳಲ್ಲಿ ಬರೋಬ್ಬರಿ 45 ರನ್ ನೀಡಿದ್ದರು. ಹೀಗಾಗಿ ಮೂರನೇ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡುವ ಸಾಧ್ಯತೆಯಿದೆ.

2 / 6
ಇನ್ನು ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಎಡಗೈ ವೇಗಿ ಅರ್ಷದೀಪ್ ಸಿಂಗ್​​ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇದಾಗ್ಯೂ ಹರ್ಷಿತ್ ರಾಣಾಗೆ ಮತ್ತೊಂದು ಚಾನ್ಸ್ ನೀಡಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಹರ್ಷಿತ್ ಬೌಲಿಂಗ್​ನಲ್ಲಿ ವಿಫಲನಾದರೂ, ಬ್ಯಾಟಿಂಗ್​ನಲ್ಲಿ 35 ರನ್​ಗಳ ಕೊಡುಗೆ ನೀಡಿದ್ದರು.

3 / 6
ಹೀಗಾಗಿ ಮೂರನೇ ಪಂದ್ಯದಲ್ಲೂ ಹರ್ಷಿತ್ ರಾಣಾ ಅವರನ್ನು ಆಲ್​ರೌಂಡರ್​ ಆಗಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಹೋಬಾರ್ಟ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ ಭಾರತ ತಂಡ ಹೀಗಿರಲಿದೆ...

4 / 6
ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ