AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕಲೆಹಾಕಿದ ಅತೀ ಕಡಿಮೆ ಸ್ಕೋರ್ ಎಷ್ಟು ಗೊತ್ತಾ?

India vs Australia Odi: ಇದು ಭಾರತ ತಂಡ ಕಲೆಹಾಕಿದ ನಾಲ್ಕನೇ ಅತ್ಯಂತ ಕಡಿಮೆ ಮೊತ್ತ. ಇದಕ್ಕೂ ಮುನ್ನ ಭಾರತದಲ್ಲೇ ಟೀಮ್ ಇಂಡಿಯಾ ಮೂರು ಬಾರಿ ಕಡಿಮೆ ಮೊತ್ತಗಳಿಸಿ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಆ ಇನಿಂಗ್ಸ್​ಗಳು ಯಾವುವು? ಯಾರ ವಿರುದ್ಧ? ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗಿನಂತಿದೆ.

TV9 Web
| Edited By: |

Updated on: Mar 19, 2023 | 11:07 PM

Share
ವಿಶಾಖಪಟ್ಟಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 117 ರನ್​ಗಳಿಗೆ ಆಲೌಟ್ ಆಗಿದೆ. ಇದು ತವರಿನಲ್ಲಿ ಭಾರತ ತಂಡ ಕಲೆಹಾಕಿದ ನಾಲ್ಕನೇ ಅತ್ಯಂತ ಕಡಿಮೆ ಮೊತ್ತ. ಇದಕ್ಕೂ ಮುನ್ನ ಭಾರತದಲ್ಲೇ ಟೀಮ್ ಇಂಡಿಯಾ ಮೂರು ಬಾರಿ ಕಡಿಮೆ ಮೊತ್ತಗಳಿಸಿ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಆ ಇನಿಂಗ್ಸ್​ಗಳು ಯಾವುವು? ಯಾರ ವಿರುದ್ಧ? ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗಿನಂತಿದೆ.

1 / 6
1- ಭಾರತ vs ಶ್ರೀಲಂಕಾ: 1986 ರಲ್ಲಿ ಕಾನ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಭಾರತ-ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 195 ರನ್ ಪೇರಿಸಿತ್ತು. 196 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಕಪಿಲ್ ದೇವ್ ನಾಯಕತ್ವದ ಟೀಮ್ ಇಂಡಿಯಾ ಕೇವಲ 78 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿತು. ಇದು ತವರಿನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಭಾರತ ತಂಡ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತವಾಗಿದೆ.

2 / 6
2- ಭಾರತ vs ವೆಸ್ಟ್ ಇಂಡೀಸ್: 1993 ರಲ್ಲಿ ಅಹಮದಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿಂಡೀಸ್ 202 ರನ್​ ಕಲೆಹಾಕಿದರೆ, ಇದನ್ನು ಚೇಸ್ ಮಾಡಿದ ಭಾರತ ಕೇವಲ 100 ರನ್​ಗಳಿಗೆ ಸರ್ವಪತನ ಕಂಡಿತು.

3 / 6
3- ಭಾರತ vs ಶ್ರೀಲಂಕಾ: 2017 ರಲ್ಲಿ ಧರ್ಮಶಾಲದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 112 ರನ್​ಗಳಿಗೆ ಆಲೌಟ್ ಆಗಿತ್ತು. ಶ್ರೀಲಂಕಾ ತಂಡವು 20.4 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 114 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

4 / 6
4- ಭಾರತ vs ಆಸ್ಟ್ರೇಲಿಯಾ: ಇದೀಗ ವಿಶಾಖಪಟ್ಟಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 117 ರನ್​ಗಳಿಗೆ ಆಲೌಟ್ ಆಗಿದೆ. ಈ ಮೊತ್ತವನ್ನು 66 ಎಸೆತಗಳಲ್ಲಿ ಚೇಸ್ ಮಾಡುವ ಮೂಲಕ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 6
ಅಂದಹಾಗೆ ಏಕದಿನ ಕ್ರಿಕೆಟ್​ನಲ್ಲಿ ಭಾರತ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತ 54. 2000 ರಲ್ಲಿ ಶಾರ್ಜಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ-ಶ್ರೀಲಂಕಾ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 5 ವಿಕೆಟ್ ನಷ್ಟಕ್ಕೆ 299 ರನ್​ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಸೌರವ್ ಗಂಗೂಲಿ ನಾಯಕತ್ವದ ಟೀಮ್ ಇಂಡಿಯಾ ಕೇವಲ 54 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿತು. ಇದು ಏಕದಿನ ಪಂದ್ಯದಲ್ಲಿ ಭಾರತ ತಂಡ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತವಾಗಿದೆ.

6 / 6
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್