Team India: ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕಲೆಹಾಕಿದ ಅತೀ ಕಡಿಮೆ ಸ್ಕೋರ್ ಎಷ್ಟು ಗೊತ್ತಾ?
TV9 Web | Updated By: ಝಾಹಿರ್ ಯೂಸುಫ್
Updated on:
Mar 19, 2023 | 11:07 PM
India vs Australia Odi: ಇದು ಭಾರತ ತಂಡ ಕಲೆಹಾಕಿದ ನಾಲ್ಕನೇ ಅತ್ಯಂತ ಕಡಿಮೆ ಮೊತ್ತ. ಇದಕ್ಕೂ ಮುನ್ನ ಭಾರತದಲ್ಲೇ ಟೀಮ್ ಇಂಡಿಯಾ ಮೂರು ಬಾರಿ ಕಡಿಮೆ ಮೊತ್ತಗಳಿಸಿ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಆ ಇನಿಂಗ್ಸ್ಗಳು ಯಾವುವು? ಯಾರ ವಿರುದ್ಧ? ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗಿನಂತಿದೆ.
1 / 6
ವಿಶಾಖಪಟ್ಟಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 117 ರನ್ಗಳಿಗೆ ಆಲೌಟ್ ಆಗಿದೆ. ಇದು ತವರಿನಲ್ಲಿ ಭಾರತ ತಂಡ ಕಲೆಹಾಕಿದ ನಾಲ್ಕನೇ ಅತ್ಯಂತ ಕಡಿಮೆ ಮೊತ್ತ. ಇದಕ್ಕೂ ಮುನ್ನ ಭಾರತದಲ್ಲೇ ಟೀಮ್ ಇಂಡಿಯಾ ಮೂರು ಬಾರಿ ಕಡಿಮೆ ಮೊತ್ತಗಳಿಸಿ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಆ ಇನಿಂಗ್ಸ್ಗಳು ಯಾವುವು? ಯಾರ ವಿರುದ್ಧ? ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗಿನಂತಿದೆ.
2 / 6
1- ಭಾರತ vs ಶ್ರೀಲಂಕಾ: 1986 ರಲ್ಲಿ ಕಾನ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಭಾರತ-ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 195 ರನ್ ಪೇರಿಸಿತ್ತು. 196 ರನ್ಗಳ ಟಾರ್ಗೆಟ್ ಬೆನ್ನತ್ತಿದ ಕಪಿಲ್ ದೇವ್ ನಾಯಕತ್ವದ ಟೀಮ್ ಇಂಡಿಯಾ ಕೇವಲ 78 ರನ್ಗಳಿಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿತು. ಇದು ತವರಿನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಭಾರತ ತಂಡ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತವಾಗಿದೆ.
3 / 6
2- ಭಾರತ vs ವೆಸ್ಟ್ ಇಂಡೀಸ್: 1993 ರಲ್ಲಿ ಅಹಮದಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿಂಡೀಸ್ 202 ರನ್ ಕಲೆಹಾಕಿದರೆ, ಇದನ್ನು ಚೇಸ್ ಮಾಡಿದ ಭಾರತ ಕೇವಲ 100 ರನ್ಗಳಿಗೆ ಸರ್ವಪತನ ಕಂಡಿತು.
4 / 6
3- ಭಾರತ vs ಶ್ರೀಲಂಕಾ: 2017 ರಲ್ಲಿ ಧರ್ಮಶಾಲದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 112 ರನ್ಗಳಿಗೆ ಆಲೌಟ್ ಆಗಿತ್ತು. ಶ್ರೀಲಂಕಾ ತಂಡವು 20.4 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 114 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು.
5 / 6
4- ಭಾರತ vs ಆಸ್ಟ್ರೇಲಿಯಾ: ಇದೀಗ ವಿಶಾಖಪಟ್ಟಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 117 ರನ್ಗಳಿಗೆ ಆಲೌಟ್ ಆಗಿದೆ. ಈ ಮೊತ್ತವನ್ನು 66 ಎಸೆತಗಳಲ್ಲಿ ಚೇಸ್ ಮಾಡುವ ಮೂಲಕ ಆಸ್ಟ್ರೇಲಿಯಾ ತಂಡವು 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
6 / 6
ಅಂದಹಾಗೆ ಏಕದಿನ ಕ್ರಿಕೆಟ್ನಲ್ಲಿ ಭಾರತ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತ 54. 2000 ರಲ್ಲಿ ಶಾರ್ಜಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ-ಶ್ರೀಲಂಕಾ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 5 ವಿಕೆಟ್ ನಷ್ಟಕ್ಕೆ 299 ರನ್ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಸೌರವ್ ಗಂಗೂಲಿ ನಾಯಕತ್ವದ ಟೀಮ್ ಇಂಡಿಯಾ ಕೇವಲ 54 ರನ್ಗಳಿಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿತು. ಇದು ಏಕದಿನ ಪಂದ್ಯದಲ್ಲಿ ಭಾರತ ತಂಡ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತವಾಗಿದೆ.