ODI World Cup 2023: ಏಕದಿನ ವಿಶ್ವಕಪ್ಗಾಗಿ ಟೀಮ್ ಇಂಡಿಯಾದ 35 ಆಟಗಾರರ ಪಟ್ಟಿ ರೆಡಿ..!
TV9 Web | Updated By: ಝಾಹಿರ್ ಯೂಸುಫ್
Updated on:
Jun 28, 2023 | 10:57 PM
India Squad For ODI World Cup: ಈ ಪಟ್ಟಿಯಲ್ಲಿರುವ ಆಟಗಾರರನ್ನು ಮುಂಬರುವ ಸರಣಿಗಳಿಗೆ ಆಯ್ಕೆ ಮಾಡಲಿದೆ. ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ 15 ಆಟಗಾರರನ್ನು ಏಕದಿನ ವಿಶ್ವಕಪ್ಗೆ ಬಳಗಕ್ಕೆ ಆರಿಸಲಾಗುತ್ತದೆ.
1 / 12
ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಈ ಟೂರ್ನಿಯಲ್ಲಿ ಒಟ್ಟು 48 ಪಂದ್ಯಗಳನ್ನಾಡಲಾಗುತ್ತದೆ. ಅಹದಾಬಾದ್ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
2 / 12
ಇನ್ನು ಭಾರತ ತಂಡವು ತನ್ನ ಅಭಿಯಾನ ಆರಂಭಿಸುವುದು ಅಕ್ಟೋಬರ್ 8 ರಂದು. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
3 / 12
ಇತ್ತ ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ಕೇವಲ 99 ದಿನಗಳು ಮಾತ್ರ ಉಳಿದಿದ್ದು, ಹೀಗಾಗಿ ಬಲಿಷ್ಠ ಭಾರತ ತಂಡವನ್ನು ರೂಪಿಸಲು ಬಿಸಿಸಿಐ ಮುಂದಾಗಿದೆ. ಇದಕ್ಕಾಗಿ ಕೆಲ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಈ ಪಟ್ಟಿಯಲ್ಲಿರುವ ಆಟಗಾರರನ್ನು ಮುಂಬರುವ ಸರಣಿಗಳಿಗೆ ಆಯ್ಕೆ ಮಾಡಲಿದೆ. ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ 15 ಆಟಗಾರರನ್ನು ಏಕದಿನ ವಿಶ್ವಕಪ್ಗೆ ಬಳಗಕ್ಕೆ ಆರಿಸಲಾಗುತ್ತದೆ.
4 / 12
ಸದ್ಯ ಬಿಸಿಸಿಐ ಆಯ್ಕೆ ಸಮಿತಿ ಸಿದ್ಧಪಡಿಸಿರುವ ಟೀಮ್ ಇಂಡಿಯಾ ಬಳಗದ ಸಂಭವನೀಯ ಪಟ್ಟಿ ಈ ಕೆಳಗಿನಂತಿದೆ.
5 / 12
ಆರಂಭಿಕರು: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಇಶಾನ್ ಕಿಶನ್, ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್.
6 / 12
ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಾಹುಲ್ ತ್ರಿಪಾಠಿ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್).
7 / 12
ಆಲ್ರೌಂಡರ್ಸ್: ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್.
8 / 12
ಸ್ಪಿನ್ನರ್ಸ್: ಯುಜ್ವೇಂದ್ರ ಚಹಾಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ರಾಹುಲ್ ಚಹರ್.
9 / 12
ವೇಗಿಗಳು: ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ದೀಪಕ್ ಚಹರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಜಯದೇವ್ ಉನಾದ್ಕಟ್, ಮುಖೇಶ್ ಕುಮಾರ್.
10 / 12
ಮುಂಬರುವ ಸರಣಿಗಳಿಗಾಗಿ ಈ 35 ಆಟಗಾರರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ. ಇವರಲ್ಲಿ ಬಹುತೇಕ ಆಟಗಾರರು ಈಗಾಗಲೇ ವೆಸ್ಟ್ ಇಂಡೀಸ್ ಸರಣಿಗೆ ಆಯ್ಕೆಯಾಗಿದ್ದಾರೆ.
11 / 12
ಆದರೆ ಗಾಯದ ಹಿನ್ನಲೆ ತಂಡದಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ, ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಅವರ ಆಗಮನದೊಂದಿಗೆ ಮುಂಬರುವ ಸರಣಿಗಳಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಲಿದೆ.
12 / 12
ಅದರಲ್ಲೂ ಏಕದಿನ ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದ್ದು, ಈ ಸರಣಿಗೆ ಆಯ್ಕೆಯಾಗುವ ಬಹುತೇಕ ಆಟಗಾರರು ವಿಶ್ವಕಪ್ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
Published On - 8:30 pm, Wed, 28 June 23