AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇದು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು, ಯಾಕೆಂದರೆ…

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಆಂಗ್ಲರು ಭರ್ಜರಿ ಜಯ ಸಾಧಿಸಿದ್ದಾರೆ. ಇನ್ನು ಐದು ಪಂದ್ಯಗಳ ಈ ಸರಣಿಯ 2ನೇ ಮ್ಯಾಚ್​ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

TV9 Web
| Edited By: |

Updated on: Jan 29, 2024 | 8:04 AM

Share
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ 246 ರನ್​ಗಳಿಗೆ ಆಲೌಟ್ ಮಾಡಿತು. ಇದಾದ ಬಳಿಕ ಬ್ಯಾಟ್ ಬೀಸಿದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 436 ರನ್ ಕಲೆಹಾಕಿತು.

1 / 6
ಇನ್ನು 190 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 420 ರನ್ ಕಲೆಹಾಕಿ ಟೀಮ್ ಇಂಡಿಯಾ 231 ರನ್​ಗಳ ಸುಲಭ ಗುರಿ ನೀಡಿದ್ದರು. ಆದರೆ ಈ ಗುರಿಯನ್ನು ಬೆನ್ನತ್ತವಲ್ಲಿ ವಿಫಲರಾಗಿರುವ ಭಾರತೀಯರು 28 ರನ್​ಗಳಿಂದ ಸೋಲೊಪ್ಪಿಕೊಂಡಿದ್ದಾರೆ. ಆದರೆ ಇದು ಟೀಮ್ ಇಂಡಿಯಾ ಪಾಲಿಗೆ ಅಂತಿಂಥ ಸೋಲಲ್ಲ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

2 / 6
ಅಂದರೆ ಭಾರತ ತಂಡವು ತವರಿನಲ್ಲಿ ಇದುವರೆಗೆ 284 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 105 ಪಂದ್ಯಗಳಲ್ಲಿ ಮೊದಲ ಇನಿಂಗ್ಸ್​ನಲ್ಲಿ 100+ ರನ್​ಗಳ ಮುನ್ನಡೆ ಸಾಧಿಸಿತ್ತು. ಈ ಪಂದ್ಯಗಳಲ್ಲಿ 70 ರಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, 35 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತು. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಯಾವುದೇ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲಿನ ರುಚಿ ನೋಡಿರಲಿಲ್ಲ.

3 / 6
ಆದರೆ ಈ ಬಾರಿ ಭಾರತ ತಂಡವನ್ನು ಮಕಾಡೆ ಮಲಗಿಸುವಲ್ಲಿ ಬೆನ್ ಸ್ಟೋಕ್ಸ್​ ಪಡೆ ಯಶಸ್ವಿಯಾಗಿದೆ. ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾವನ್ನು 28 ರನ್​ಗಳಿಂದ ಸೋಲಿಸಿ ಇಂಗ್ಲೆಂಡ್ ತಂಡ ಹೊಸ ಇತಿಹಾಸ ಬರೆದಿದೆ.

4 / 6
ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಹೈದರಾಬಾದ್​ ರಾಜೀವ್ ಗಾಂಧಿ ಮೈದಾನದಲ್ಲಿ ಟೀಮ್ ಇಂಡಿಯಾ ಸೋತಿದೆ. ಹಾಗೆಯೇ 12 ವರ್ಷಗಳ ಬಳಿಕ ಭಾರತ ತಂಡವು ತವರಿನಲ್ಲಿ ಸತತ ಮೂರು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವಲ್ಲಿ ವಿಫಲವಾಗಿದೆ.

5 / 6
ಈ ಎಲ್ಲಾ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಈ ಪರಾಜಯವನ್ನು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು ಒಂದು ಪರಿಗಣಿಸಲಾಗಿದೆ.

6 / 6
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ

ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?

ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ

ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು

‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ

ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್