ಟೀಮ್ ಇಂಡಿಯಾದ ‘ಸೂಪರ್-8’ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
T20 World Cup 2026: ಸೂಪರ್-8 ಎಂಬುದು 8 ತಂಡಗಳ ನಡುವಣ ಕಾದಾಟ. ಇಲ್ಲಿ ಎಂಟು ತಂಡಗಳನ್ನು ಎರಡು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಅಲ್ಲದೆ ಈ ಗ್ರೂಪ್ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೆಮಿಫೈನಲ್ಗೆ ಪ್ರವೇಶಿಸುತ್ತದೆ.
Updated on: Feb 18, 2026 | 8:09 AM

T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ...

ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ vs ಝಿಂಬಾಬ್ವೆ: ಟೀಮ್ ಇಂಡಿಯಾ ತನ್ನ ಎರಡನೇ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ತಂಡವನ್ನು ಎದುರಿಸಲಿದೆ. ಫೆಬ್ರವರಿ 26 ರಂದು ನಡೆಯಲಿರುವ ಈ ಮ್ಯಾಚ್ಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ vs ವೆಸ್ಟ್ ಇಂಡೀಸ್: ಮಾರ್ಚ್ 1 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅಂದರೆ ಸೂಪರ್-8 ಹಂತದಲ್ಲಿ 2 ಗ್ರೂಪ್ಗಳಿರಲಿದ್ದು, ಎರಡು ಗ್ರೂಪ್ಗಳಿಂದ ತಲಾ 2 ತಂಡಗಳು ಸೆಮಿಫೈನಲ್ಗೆ ಪ್ರವೇಶಿಸುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮುಖ್ಯ ಎನ್ನಬಹುದು.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




