Team India: ಟೀಮ್ ಇಂಡಿಯಾದ ಸೋಲು-ಗೆಲುವಿನ ಲೆಕ್ಕಾಚಾರ ಸಮ

Edited By:

Updated on: Mar 10, 2024 | 8:53 AM

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಮುಕ್ತಾಯಗೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಭಾರತ ತಂಡವು ಗೆಲುವು ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ.

1 / 5
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ (Team India) 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಜಯದೊಂದಿಗೆ ತವರಿನಲ್ಲಿ ಭಾರತ ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ವಿಶೇಷ ಎಂದರೆ ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ (Team India) ಟೆಸ್ಟ್ ಪಂದ್ಯಗಳ ಫಲಿತಾಂಶದಲ್ಲೂ ಸಮಬಲ ಸಾಧಿಸಿದೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ (Team India) 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಜಯದೊಂದಿಗೆ ತವರಿನಲ್ಲಿ ಭಾರತ ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ವಿಶೇಷ ಎಂದರೆ ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ (Team India) ಟೆಸ್ಟ್ ಪಂದ್ಯಗಳ ಫಲಿತಾಂಶದಲ್ಲೂ ಸಮಬಲ ಸಾಧಿಸಿದೆ.

2 / 5

ಅಂದರೆ ಭಾರತ ತಂಡವು ಇದುವರೆಗೆ 579 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 178 ಪಂದ್ಯಗಳಲ್ಲಿ ಸೋತರೆ, 178 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಸಮಬಲ ಸಾಧಿಸಿದೆ.

3 / 5

ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ 2000 ವರೆಗೆ ಟೀಮ್ ಇಂಡಿಯಾ ಕೇವಲ 61 ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿತ್ತು. ಅಲ್ಲದೆ 112 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಆದರೆ ಕಳೆದ 24 ವರ್ಷಗಳಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆಯುತ್ತಾ ಬಂದಿದೆ.

4 / 5

ಕಳೆದ 24 ವರ್ಷಗಳ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ, ಭಾರತ ತಂಡವು 117 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನು ಸೋತಿರುವುದು ಕೇವಲ 66 ಮ್ಯಾಚ್​ಗಳಲ್ಲಿ ಮಾತ್ರ. ಹೀಗಾಗಿಯೇ 2000 ರಲ್ಲಿ 61 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಭಾರತ ತಂಡವು 2024 ರಲ್ಲಿ ಗೆಲುವಿನ ಸಂಖ್ಯೆಯನ್ನು 178 ಕ್ಕೇರಿಸುವಲ್ಲಿ ಯಶಸ್ವಿಯಾಗಿದೆ.

5 / 5

ಈ ಮೂಲಕ ಕಳೆದ 2 ದಶಕದಿಂದ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು ಅಧಿಪತ್ಯ ಸಾಧಿಸುತ್ತಾ ಬಂದಿದ್ದು, ಈ ಪಾರುಪತ್ಯದೊಂದಿಗೆ ಇದೀಗ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಮಣಿಸಿ ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಅಂದರೆ 112 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವೊಂದು ಮೊದಲ ಪಂದ್ಯವನ್ನು ಸೋತು 4-1 ಅಂತರದಿಂದ ಸರಣಿ ಗೆದ್ದಿರುವುದು ಇದೇ ಮೊದಲು.

Loading...
Unable to load recommendations.
Follow Us