ಮಳೆಯಿಂದಾಗಿ ಭಾರತ- ಕಿವೀಸ್ ಅಭ್ಯಾಸ ಪಂದ್ಯ ರದ್ದು; ರೋಹಿತ್ ಪಡೆಯ ಮುಂದಿನ ಎದುರಾಳಿ ಪಾಕಿಸ್ತಾನ
TV9 Web | Updated By: ಪೃಥ್ವಿಶಂಕರ
Updated on:
Oct 19, 2022 | 3:02 PM
T20 World Cup 2022: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಅಭ್ಯಾಸ ಪಂದ್ಯ ಮಳೆಯಿಂದ ರದ್ದಾಗಿದೆ. ಇಂದು ಬ್ರಿಸ್ಬೇನ್‌ನಲ್ಲಿ 1.30 ಕ್ಕೆ ಪಂದ್ಯ ಆರಂಭವಾಗಬೇಕಿತ್ತು. ಆದರೆ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಉಭಯ ತಂಡಗಳ ಅಭ್ಯಾಸ ಪಂದ್ಯವನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ.
1 / 5
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಅಭ್ಯಾಸ ಪಂದ್ಯ ಮಳೆಯಿಂದ ರದ್ದಾಗಿದೆ. ಇಂದು ಬ್ರಿಸ್ಬೇನ್‌ನಲ್ಲಿ 1.30 ಕ್ಕೆ ಪಂದ್ಯ ಆರಂಭವಾಗಬೇಕಿತ್ತು. ಆದರೆ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಉಭಯ ತಂಡಗಳ ಅಭ್ಯಾಸ ಪಂದ್ಯವನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ.
2 / 5
ಬ್ರಿಸ್ಬೇನ್‌ನಲ್ಲಿ ಇಂದು ಬೆಳಿಗ್ಗೆಯಿಂದಲೂ ಮಳೆ ಸುರಿಯುತ್ತಿದ್ದು, ಹೀಗಾಗಿ ಪಂದ್ಯ ನಿಗದಿತ ಸಮಯಕ್ಕೆ ಆರಂಭವಾಗಲಿಲ್ಲ. ಒಂದು ವೇಳೆ ಸಂಜೆ 4.30 ರೊಳಗೆ ಮಳೆ ನಿಂತರೆ ಪಂದ್ಯದ ಓವರ್ಗಳಲ್ಲಿ ಖಡಿತಗೊಳಿಸಿ ಪಂದ್ಯವನ್ನು ಆಯೋಜಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಅದರೆ ಪಂದ್ಯ ಆಯೋಜಿಸಲು ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾಗದ ಕಾರಣ ಪಂದ್ಯವನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ.
3 / 5
ಈ ಪಂದ್ಯಕ್ಕೂ ಮುನ್ನ ಬ್ರಿಸ್ಬೇನ್‌ನಲ್ಲಿ ನಡೆದ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ಅಭ್ಯಾಸ ಪಂದ್ಯಕ್ಕೂ ವರುಣನ ಅವಕೃಪೆ ಎದುರಾಗಿತ್ತು. ಹೀಗಾಗಿ ಈ ಪಂದ್ಯವನ್ನು ಸಹ ರದ್ದುಗೊಳಿಸಲಾಯಿತು.
4 / 5
ಇನ್ನೂ ಮೊದಲನೇ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವನ್ನು ಬಗ್ಗುಬಡಿದಿದ್ದ ಟೀಂ ಇಂಡಿಯಾ ಎರಡನೇ ಪಂದಯವನ್ನು ಗೆಲ್ಲುವ ಮೂಲಕ ಸೂಪರ್ 12 ಗೆ ಭರ್ಜರಿ ತಯಾರಿ ಮಾಡಿಕೊಳ್ಳುವ ಕಾತುರದಲ್ಲಿತ್ತು. ಈಗ ಅ. 23 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.
5 / 5
ಟಿ20 ವಿಶ್ವಕಪ್ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.