INDW vs PAKW: ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿಂದು ಭಾರತ-ಪಾಕಿಸ್ತಾನ ಮುಖಾಮುಖಿ: ಪಂದ್ಯ ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?
TV9 Web | Updated By: Vinay Bhat
Updated on:
Feb 12, 2023 | 9:10 AM
India Women vs Pakistan Women: ಐಸಿಸಿ ಮಹಿಳಾ ಟಿ20 ವಿಶ್ವಕಪ್ಗೆ ಚಾಲನೆ ಸಿಕ್ಕಿದ್ದು ಇಂದು ನಡೆಯಲಿರುವ ನಾಲ್ಕನೇ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಬದ್ಧವೈರಿ ಪಾಕಿಸ್ತಾನ ಮಹಿಳೆಯರ ವಿರುದ್ಧ ಹೋರಾಟ ನಡೆಸಲಿದೆ.
1 / 8
ದಕ್ಷಿಣ ಆಫ್ರಿಕಾದಲ್ಲಿ ಇದೇ ಮೊದಲ ಬಾರಿಗೆ ಐಸಿಸಿ ಮಹಿಳಾ ಟಿ20 ವಿಶ್ವಕಪ್ಗೆ ಚಾಲನೆ ಸಿಕ್ಕಿದ್ದು ಇದುವರೆಗೆ ಮೂರು ಪಂದ್ಯಗಳು ನಡೆದಿವೆ. ಇಂದು ನಡೆಯಲಿರುವ ನಾಲ್ಕನೇ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಬದ್ಧವೈರಿ ಪಾಕಿಸ್ತಾನ ಮಹಿಳೆಯರ ವಿರುದ್ಧ ಹೋರಾಟ ನಡೆಸಲಿದೆ.
2 / 8
ಮಹಿಳಾ ಟಿ20 ವಿಶ್ವಕಪ್ 2023 ರಲ್ಲಿ ಭಾರತಕ್ಕೆ ಇದು ಚೊಚ್ಚಲ ಪಂದ್ಯವಾಗಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ಇದಕ್ಕೂ ಮುನ್ನ ನಡೆದ ಎರಡು ಅಭ್ಯಾಸ ಪಂದ್ಯದಲ್ಲಿ ಹರ್ಮನ್ ಪಡೆ ಸೋಲು- ಗೆಲುವನ್ನು ಸಮಾನವಾಗಿ ಕಂಡಿದೆ.
3 / 8
ಭಾರತ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಇಂದಿನ ಪಂದ್ಯದಲ್ಲಿ ಆಡದಿರುವುದು ದೊಡ್ಡ ಹಿನ್ನಡೆ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಎಡಗೈ ನಡುಬೆರಳಿಗೆ ಗಾಯ ಮಾಡಿಕೊಂಡಿದ್ದ ಮಂದಾನ ಇನ್ನೂ ಸಂಪೂರ್ಣ ಚೇತರಿಕೆ ಕಂಡಿಲ್ಲ. ಹೀಗಾಗಿ ಅವರು ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
4 / 8
ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಮಂದಾನ ಆಸ್ಟ್ರೇಲಿಯಾ ವಿರುದ್ಧ ಮೂರನೇ ಕ್ರಮಾಂಕಕ್ಕೆ ಬ್ಯಾಟಿಂಗ್ಗಿಳಿದು ಕೇವಲ ಮೂರು ಎಸೆತಗಳನ್ನು ಮಾತ್ರ ಆಡಿದ್ದರು. ಬಳಿಕ ಬಾಂಗ್ಲಾದೇಶದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲೂ ಸ್ಮೃತಿ ಕಣಕ್ಕಿಳಿದಿರಲಿಲ್ಲ. ಒಂದು ವೇಳೆ ಮಂದಾನ ಅವರ ಗಾಯ ಮತ್ತಷ್ಟು ಗಂಭೀರವಾದರೆ ಟೂರ್ನಿಯಿಂದ ಹೊರಬೀಳುವ ಸಾಧ್ಯತೆ ಕೂಡ ಇದೆ.
5 / 8
ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಕೇಪ್ಟೌನ್ನ ನ್ಯೂಲೆಂಡ್ಸ್ನಲ್ಲಿ ಆಯೋಜಿಸಲಾಗಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 6:30ಕ್ಕೆ ಆರಂಭವಾಗಲಿದೆ. 6 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
6 / 8
ಭಾರತದಲ್ಲಿ ಮಹಿಳೆಯರ ಟಿ20 ವಿಶ್ವಕಪ್ 2023 ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ನೋಡಬಹುದು.
7 / 8
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್) ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.
8 / 8
ಪಾಕಿಸ್ತಾನ ತಂಡ: ಮುನೀಬಾ ಅಲಿ, ಸಿದ್ರಾ ಅಮೀನ್, ಬಿಸ್ಮಾ ಮರೂಫ್ (ನಾಯಕಿ), ಒಮೈಮಾ ಸೊಹೈಲ್, ನಿದಾ ದಾರ್, ಅಲಿಯಾ ರಿಯಾಜ್, ಸಿದ್ರಾ ನವಾಜ್ (ವಿಕೆಟ್ ಕೀಪರ್), ಫಾತಿಮಾ ಸನಾ, ನಶ್ರಾ ಸಂಧು, ಜವೇರಿಯಾ ಖಾನ್, ಐಮನ್ ಅನ್ವರ್, ಸಾದಿಯಾ ಇಕ್ಬಾಲ್, ಆಯೇಶಾ ನಸೀಮ್ , ತುಬಾ ಹಸನ್, ಸದಾಫ್ ಶಮಾಸ್.