ಏಕದಿನ ವಿಶ್ವಕಪ್​ಗೂ ಮುನ್ನ 11 ಆಟಗಾರರು ಗಾಯಾಳು

ODI World Cup 2023: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಈ ಆಟಗಾರರು ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಹೀಗೆ ಗಾಯಗೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

| Edited By: Zahir Yusuf

Updated on: Sep 16, 2023 | 7:27 PM

ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಈ ಕ್ರಿಕೆಟ್ ಮಹಾಸಮರಕ್ಕೂ ಮುನ್ನ ಇದೀಗ ಕೆಲ ತಂಡಗಳಿಗೆ ಗಾಯದ ಸಮಸ್ಯೆ ಎದುರಾಗಿದೆ. ತಂಡದ ಪ್ರಮುಖ ಆಟಗಾರರು ಗಾಯಾಳುವಾಗಿದ್ದಾರೆ.

1 / 13
ಸದ್ಯ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಈ ಆಟಗಾರರು ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಹೀಗೆ ಗಾಯಗೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 13
1- ಟ್ರಾವಿಸ್ ಹೆಡ್: ಸೌತ್ ಆಫ್ರಿಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದ ವೇಳೆ ಅಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಗಾಯಗೊಂಡಿದ್ದಾರೆ. ಟ್ರಾವಿಸ್ ಅವರ ಎಡಗೈ ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

3 / 13
2- ಸ್ಟೀವ್ ಸ್ಮಿತ್: ಎಡಗೈ ಮಣಿಕಟ್ಟಿನ ಗಾಯದ ಕಾರಣ ಸ್ಟೀವ್ ಸ್ಮಿತ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿಲ್ಲ. ಇನ್ನು ಭಾರತದ ವಿರುದ್ಧ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ.

4 / 13
3- ಮಿಚೆಲ್ ಸ್ಟಾರ್ಕ್: ಆ್ಯಶಸ್ ಸರಣಿಯ ಬಳಿಕ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್​ ಯಾವುದೇ ಪಂದ್ಯವಾಡಿಲ್ಲ. ಭುಜದ ಗಾಯ ಮತ್ತು ತೊಡೆಸಂದು ನೋವಿನ ಸಮಸ್ಯೆಯ ಕಾರಣ ಸ್ಟಾರ್ಕ್​ ಕೂಡ ಮೈದಾನದಿಂದ ಹೊರಗುಳಿದಿದ್ದಾರೆ.

5 / 13
4- ಟಿಮ್ ಸೌಥಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಟಿಮ್ ಸೌಥಿ ಅವರ ಬಲಗೈ ಹೆಬ್ಬೆರಳಿನಲ್ಲಿ ಮೂಳೆ ಮುರಿತವಾಗಿದೆ. ಹೀಗಾಗಿ ಸೌಥಿ ಕೂಡ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

6 / 13
5- ಮಹೀಶ್ ತೀಕ್ಷಣ: ಶ್ರೀಲಂಕಾದ ಸ್ಪಿನ್ನರ್ ಮಹೀಶ್ ತೀಕ್ಷಣ ಮಂಡಿರಜ್ಜು ಸಮಸ್ಯೆಯ ಕಾರಣ ಏಷ್ಯಾಕಪ್ ಫೈನಲ್​ನಿಂದ ಹೊರಗುಳಿದಿದ್ದಾರೆ. ಇನ್ನೆರಡು ವಾರಗಳಲ್ಲಿ ಸಂಪೂರ್ಣ ಚೇತರಿಸಿಕೊಂಡರೆ ಮಾತ್ರ ತೀಕ್ಷಣ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

7 / 13
6- ದುಷ್ಮಂತ ಚಮೀರ: ಶ್ರೀಲಂಕಾ ವೇಗಿ ದುಷ್ಮಂತ ಚಮೀರಾ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಭುಜದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ನಿಂದ ಹೊರಗುಳಿದಿದ್ದರು. ಇನ್ನು ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಅವರು ಲಂಕಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

8 / 13
7- ವನಿಂದು ಹಸರಂಗ: ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿದಿರುವ ಶ್ರೀಲಂಕಾ ಆಲ್​ರೌಂಡರ್ ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಅಂದರೆ ಅಕ್ಟೋಬರ್ 5 ರೊಳಗೆ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರು ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

9 / 13
8- ನಸೀಮ್ ಶಾ: ಏಷ್ಯಾಕಪ್ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿರುವ ಪಾಕಿಸ್ತಾನ್ ವೇಗಿ ನಸೀಮ್ ಶಾ ಏಕದಿನ ವಿಶ್ವಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

10 / 13
9- ಹ್ಯಾರಿಸ್ ರೌಫ್: ಪಾಕ್ ತಂಡದ ವೇಗಿ ಹ್ಯಾರಿಸ್ ರೌಫ್ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಾಗ್ಯೂ ಅವರು ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದೆ ಪಾಕಿಸ್ತಾನ್ ತಂಡ.

11 / 13
10- ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಅರ್ಧದಲ್ಲೇ ಹೊರಗುಳಿದಿದ್ದರು. ಇನ್ನು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

12 / 13
11- ಅಕ್ಷರ್ ಪಟೇಲ್: ಟೀಮ್ ಇಂಡಿಯಾ ಆಲ್​ರೌಂಡರ್ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಇತ್ತ ಅಕ್ಷರ್ ಗಾಯಗೊಳ್ಳುತ್ತಿದ್ದಂತೆ ವಾಷಿಂಗ್ಟನ್ ಸುಂದರ್ ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ. ಅಂದರೆ ಅಕ್ಷರ್ ಪಟೇಲ್ ವಿಶ್ವಕಪ್​​ಗೂ ಮುನ್ನ ಫಿಟ್​ನೆಸ್ ಸಾಧಿಸಲು ವಿಫಲರಾದರೆ ಟೀಮ್ ಇಂಡಿಯಾದಿಂದ ಹೊರಬೀಳುವುದು ಖಚಿತ ಎನ್ನಬಹುದು.

13 / 13
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು

ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ

ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!

ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video

ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ

ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ

ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ

‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​