ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮಣಿಕಟ್ಟಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಶಸ್ ಸರಣಿ ಬಳಿಕ ಯಾವುದೇ ಟೂರ್ನಿಯಲ್ಲೂ ಕಾಣಿಸಿಕೊಳ್ಳದ ಕಮಿನ್ಸ್ ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ಭಾರತದ ವಿರುದ್ಧ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಅವರು ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯಬಹುದು.