- Kannada News Photo gallery Cricket photos Instead of Abhishek Sharma, Jasprit Bumrah won the Player of the Match award
ಅಬ್ಬರಿಸಿ ಬೊಬ್ಬಿರಿದರೂ ಅಭಿಷೇಕ್ ಶರ್ಮಾಗೆ ಸಿಕ್ಕಿಲ್ಲ ಪಂದ್ಯ ಶ್ರೇಷ್ಠ ಪ್ರಶಸ್ತಿ..!
India vs New Zealand 3rd T20: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಚೇಸಿಂಗ್ನೊಂದಿಗೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ.
Updated on: Jan 26, 2026 | 7:26 AM

ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು.

ಅರ್ಧಶತಕದ ಬಳಿಕ ಕೂಡ ಆರ್ಭಟ ಮುಂದುವರೆಸಿದ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ವಿಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿಲ್ಲ ಎಂಬುದು ಅಚ್ಚರಿ.

ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಲಭಿಸಿದ್ದು ಜಸ್ಪ್ರೀತ್ ಬುಮ್ರಾ ಅವರಿಗೆ. ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದಿದ್ದ ಬುಮ್ರಾ ನೀಡಿದ್ದು ಕೇವಲ 17 ರನ್ ಮಾತ್ರ. ಇದರ ನಡುವೆ 3 ವಿಕೆಟ್ಗಳನ್ನು ಸಹ ಕಬಳಿಸಿದ್ದರು.

ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸುವ ಮೂಲಕ ನ್ಯೂಝಿಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಜಸ್ಪ್ರೀತ್ ಬುಮ್ರಾ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಭಾರತ ತಂಡದ ವೇಗಿಗೆ ನೀಡಲಾಗಿದೆ.

ಇದಾಗ್ಯೂ ಈ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ ಮೂರು ಪಂದ್ಯಗಳ ಮೂಲಕ ಒಟ್ಟು 152 ರನ್ ಕಲೆಹಾಕಿದ್ದಾರೆ. ಈ ಭರ್ಜರಿ ಪ್ರದರ್ಶನವನ್ನು ಮುಂದಿನ ಎರಡು ಮ್ಯಾಚ್ಗಳಲ್ಲಿ ಮುಂದುವರೆಸಿದರೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳಬಹುದು.
