Updated on:Sep 18, 2021 | 10:11 PM
ಐಪಿಎಲ್ ದ್ವಿತಿಯಾರ್ಧಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಭಾನುವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ 5 ಬಾರಿ ಟ್ರೋಫಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿಯ ಚಾಂಪಿಯನ್ಸ್ ಸಿಎಸ್ಕೆ ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ ಒಂದು ಪಂದ್ಯವನ್ನಾಡಿದೆ.
ಆ ಪಂದ್ಯದಲ್ಲಿ ಸಿಎಸ್ಕೆ ನೀಡಿದ 218 ರನ್ಗಳ ಬೃಹತ್ ಮೊತ್ತವನ್ನು ಚೇಸ್ ಮಾಡಿ ಮುಂಬೈ ಇಂಡಿಯನ್ಸ್ ಜಯಗಳಿಸಿರುವುದು ವಿಶೇಷ. ಅಂದರೆ ಎರಡೂ ತಂಡಗಳು ಭರ್ಜರಿ ಬ್ಯಾಟಿಂಗ್ ಬಲ ಹೊಂದಿರುವುದು ಸ್ಪಷ್ಟ. ಹೀಗಾಗಿ ದ್ವಿತಿಯಾರ್ಧದಲ್ಲೂ ಬಲಿಷ್ಠ ಬಳಗದಿಂದ ರೋಚಕ ಹೋರಾಟ ನಿರೀಕ್ಷಿಸಬಹುದು. ಅದರಂತೆ ಯುಎಇನ ಮೊದಲ ಮುಖಾಮುಖಿಯಲ್ಲಿ ಸಂಭಾವ್ಯ ತಂಡಗಳು ಹೀಗಿರಲಿದೆ.
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ , ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ನಾಥನ್ ಕೌಲ್ಟರ್-ನೈಲ್
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್.ಧೋನಿ, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್ವುಡ್
ಫಾಫ್ ಡುಪ್ಲೆಸಿಸ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಫಿಟ್ ಆಗಿದ್ದರೆ ರಾಬಿನ್ ಉತ್ತಪ್ಪ ಹೊರಗುಳಿಯಲಿದ್ದಾರೆ. ಹಾಗೆಯೇ ಸ್ಯಾಮ್ ಕರನ್ ಕ್ವಾರಂಟೈನ್ನಲ್ಲಿದ್ದು ಹೀಗಾಗಿ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
Published On - 10:10 pm, Sat, 18 September 21