- Kannada News Photo gallery Cricket photos IPL 2021: Gautam Gambhir names 4 teams that will qualify for the playoffs
IPL 2021: ಪ್ಲೇ ಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್
IPL 2021: ಮೊದಲ ಪಂದ್ಯದ ಬೆನ್ನಲ್ಲೇ ತಂಡಗಳ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದೆ. ಈ ಲೆಕ್ಕಾಚಾರಗಳ ಮೂಲಕ ಇದೀಗ ಕೆಕೆಆರ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಈ ಬಾರಿ ಪ್ಲೇ ಆಫ್ ಪ್ರವೇಶಿಸಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.
Updated on: Sep 20, 2021 | 5:56 PM

ಯುಎಇನಲ್ಲಿ ಐಪಿಎಲ್ನ ದ್ವಿತಿಯಾರ್ಧ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ಗೆ ಸೋಲುಣಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಶುಭಾರಂಭ ಮಾಡಿದೆ. ಇತ್ತ ಮೊದಲ ಪಂದ್ಯದ ಬೆನ್ನಲ್ಲೇ ತಂಡಗಳ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದೆ. ಈ ಲೆಕ್ಕಾಚಾರಗಳ ಮೂಲಕ ಇದೀಗ ಕೆಕೆಆರ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಈ ಬಾರಿ ಪ್ಲೇ ಆಫ್ ಪ್ರವೇಶಿಸಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

ಗೌತಮ್ ಗಂಭೀರ್ ಪ್ರಕಾರ ಈ ಸಲ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತ. ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಡೆಲ್ಲಿ ದ್ವಿತಿಯಾರ್ಧದಲ್ಲೂ ಉತ್ತಮವಾಗಿ ಆಡಲಿದೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

csk

ಹಾಗೆಯೇ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಹ ಪ್ಲೇ ಆಫ್ ಪ್ರವೇಶಿಸಲಿದೆ. ಆರ್ಸಿಬಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ದ್ವಿತಿಯಾರ್ಧದಲ್ಲೂ ಗೆಲುವಿನ ನಾಗಾಲೋಟ ಮುಂದುವರೆಸಲಿದೆ. ಹಾಗಾಗಿ ಆರ್ಸಿಬಿ ಕೂಡ ಪ್ಲೇ ಆಫ್ ಆಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

ಇನ್ನು ಟಾಪ್-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್. ಮುಂಬೈ ಕೂಡ ಪ್ಲೇ ಆಫ್ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.




