IPL 2021: ಐಪಿಎಲ್ ಫೀವರ್ ಶುರು: ದುಬೈ ತಲುಪಿದ ಧೋನಿ ಸೈನ್ಯ: ಇಲ್ಲಿದೆ ಫೋಟೋಗಳು

CSK: ನಾಯಕ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಋತುರಾಜ್ ಗಾಯಕ್ವಾಡ್ ಮೊದಲಾದವರು ಚೆನ್ನೈನಿಂದ ದುಬೈ ವಿಮಾನ ಏರಿದ್ದಾರೆ. ಉಳಿದ ಆಟಗಾರರು ನಂತರದ ದಿನಗಳಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

Aug 14, 2021 | 8:09 AM
TV9kannada Web Team

| Edited By: Vinay Bhat

Aug 14, 2021 | 8:09 AM

ಕೋವಿಡ್ ಕಾರಣದಿಂದ ಅರ್ಧದಲ್ಲಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಂದಿನ ಭಾಗ ಯುಎಇ ನಲ್ಲಿ ನಡೆಯಲಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಪುನರಾರಂಭವಾಗಲಿದ್ದು, ಸಿದ್ದತೆಗಳು ನಡೆಯುತ್ತಿದೆ. ಇದರ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲವು ಆಟಗಾರರು ದುಬೈಗೆ ತೆರಳಿದ್ದಾರೆ.

1 / 8
ಶುಕ್ರವಾರ ( ಆಗಸ್ಟ್ 13 ) ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ದುಬೈಗೆ ಪ್ರಯಾಣ ಬೆಳೆಸಿದೆ.

2 / 8
ನಾಯಕ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಋತುರಾಜ್ ಗಾಯಕ್ವಾಡ್ ಮೊದಲಾದವರು ಚೆನ್ನೈನಿಂದ ದುಬೈ ವಿಮಾನ ಏರಿದ್ದಾರೆ. ಉಳಿದ ಆಟಗಾರರು ನಂತರದ ದಿನಗಳಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

3 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ ದುಬೈ ತಲುಪಿದ ನಂತರ 7 ದಿನಗಳ ಕಾಲ ವ್ಯವಸ್ಥಿತ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಿದೆ. ತದನಂತರ ತಂಡದ ಇತರೆ ಆಟಗಾರರ ಜೊತೆಗೂಡಿ ಈ ಆಟಗಾರರು ಅಭ್ಯಾಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದಾಗಿದೆ.

4 / 8
ಏಪ್ರಿಲ್ ನಲ್ಲಿ ನಡೆದಿದ್ದ ಐಪಿಎಲ್ ಕೂಟ ಕೋವಿಡ್ ಕಾರಣದಿಂದ ಅರ್ಧದಲ್ಲಿಯೇ ಸ್ಥಗಿತ ಮಾಡಲಾಗಿತ್ತು. ಇದೀಗ ಕೂಟವನ್ನು ಯುಎಇ ಗೆ ಸ್ಥಳಾಂತರಿಸಲಾಗಿದೆ. ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಪಂದ್ಯಗಳು ನಡೆಯಲಿದೆ.

5 / 8
ಇನ್ನೂ ಐಪಿಎಲ್ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಗಸ್ಟ್ 13ರಂದು ಐಪಿಎಲ್​ಗಾಗಿ ಯುಎಇಗೆ ತೆರಳಿದೆ. ಯುಎಇಗೆ ತೆರಳುವುದಕ್ಕೂ ಮುನ್ನ ಎಲ್ಲಾ 8 ತಂಡಗಳ ಆಟಗಾರರು ಕೋವಿಡ್-19 ವ್ಯಾಕ್ಸಿನೇಶನ್ ಮುಗಿಸಿರಬೇಕು ಎಂದು ಬಿಸಿಸಿಐ ಖಡಕ್ ಆಗಿ ಸೂಚಿಸಿದೆ.

6 / 8
ಕಳೆದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೊರೊನಾ ವೈರಸ್ ಕಾರಣದಿಂದಾಗಿ ಅರ್ಧದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

7 / 8
 ಚೆನ್ನೈ ಸೂಪರ್ ಕಿಂಗ್ಸ್ ತಂಡ

IPL 2021 If MS Dhoni doesnt play IPL 2022 I too wont play says Suresh Raina

8 / 8

Follow us on

Most Read Stories

Click on your DTH Provider to Add TV9 Kannada