IPL 2021, RR vs MI: ಮುಂಬೈಗೂ ಶಾಕ್ ನೀಡುತ್ತಾ ಸ್ಯಾಮ್ಸನ್ ಪಡೆ?: ಇಂದಿನ ಪಂದ್ಯದಲ್ಲಿ ಯಾರಿಗೆ ಗೆಲುವು?

Rajasthan Royals vs Mumbai Indians: ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಉಳಿದೆಲ್ಲ ತಂಡಗಳಿಗಿಂತ ಕೆಳ ಮಟ್ಟದಲ್ಲಿದೆ. ಬ್ಯಾಟರ್​ಗಳ ಕಳಪೆ ಪ್ರದರ್ಶನವೇ ದೊಡ್ಡ ತಲೆನೋವಾಗಿದೆ.

TV9 Web
| Updated By: Vinay Bhat

Updated on: Oct 05, 2021 | 11:04 AM

ಐಪಿಎಲ್ 2021ರ (IPL 2021) 51ನೇ ಪಂದ್ಯದಲ್ಲಿಂದು ಸಂಜು ಸ್ಯಾಮ್ಸನ್ (Sanju Samson) ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (RR vs MI) ತಂಡಗಳು ಮುಖಾಮುಖಿ ಆಗುತ್ತಿವೆ.

1 / 7
ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Sharjah Cricket Stadium) ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಈಗಾಗಲೇ ಮೂರು ತಂಡಗಳು ಕ್ವಾಲಿಫೈಯರ್ ಆಗಿದ್ದು, ಇನ್ನೊಂದು ಸ್ಥಾನಕ್ಕಾಗಿ ನಾಲ್ಕು ತಂಡಗಳ ನಡುವೆ ಹೋರಾಟ ನಡೆಯುತ್ತಿದೆ.

2 / 7
ರಾಜಸ್ಥಾನ್‌ ರಾಯಲ್ಸ್‌ ಕಳೆದ ಪಂದ್ಯದಲ್ಲಿ ಚೆನ್ನೈಯನ್ನು ಸೋಲಿಸುವ ಮೂಲಕ ರೇಸ್‌ನಲ್ಲಿ ಉಳಿದುಕೊಂಡಿದೆ. ಎವಿನ್ ಲೆವಿಸ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಲಯದಲ್ಲಿದ್ದು ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಸಂಜು ಸ್ಯಾಮ್ಸನ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಶಿವಂ ದುಬೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು.

3 / 7
ಇತ್ತ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಉಳಿದೆಲ್ಲ ತಂಡಗಳಿಗಿಂತ ಕೆಳ ಮಟ್ಟದಲ್ಲಿದೆ. ಬ್ಯಾಟರ್​ಗಳ ಕಳಪೆ ಪ್ರದರ್ಶನವೇ ದೊಡ್ಡ ತಲೆನೋವಾಗಿದೆ. ಅದರಲ್ಲೂ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಯಾವೊಂದು ಪಂದ್ಯದಲ್ಲಿ ಮಿಂಚುತ್ತಿಲ್ಲ.

4 / 7
ಓಪನರ್​ಗಳಾದ ರೋಹಿತ್ ಶರ್ಮಾ ಹಾಗೂ ಕ್ವಿಂಟರ್ ಡಿಕಾಕ್ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಹಾರ್ದಿಕ್ ಪಾಂಡ್ಯ ಹಾಗೂ ಕೀರೊನ್ ಪೊಲಾರ್ಡ್ ಕೂಡ ಫಾರ್ಮ್​ನಲ್ಲಿಲ್ಲ.

5 / 7
ದ್ರೆ, ಮುಂಬೈ ಬೌಲಿಂಗ್​ನಲ್ಲಿ ಬಲ ಪಡೆದುಕೊಂಡಿದೆ. ಜಸ್​ಪ್ರೀತ್ ಬುಮ್ರಾ ಹಾಗೂ ರಾಹುಲ್ ಚಹಾರ್ ವಿಕೆಟ್ ಟೇಕಿಂಗ್ ಬೌಲರ್​ಗಳಾದರೆ, ಕ್ರುನಾಲ್ ಪಾಂಡ್ಯ ಹಾಗೂ ಟ್ರೆಂಟ್ ಬೌಲ್ಟ್ ಇವರಿಗೆ ಸಾಥ್ ನೀಡುತ್ತಿದ್ದಾರೆ

6 / 7
ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 23 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 12 ಮತ್ತು ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಹಾಲಿ ಚಾಂಪಿಯನ್ ರೋಹಿತ್ ಪೊಡೆಗೆ ಇದು ಪ್ರತಿಷ್ಠೆಯ ಪಂದ್ಯ ಆಗಿರುವುದರಿಂದ ಗೆಲ್ಲುವ ಸಂಭವ ಹೆಚ್ಚಿದೆ.

7 / 7
Follow us