ಕ್ರಿಸ್ ಗೇಲ್: ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಐಪಿಎಲ್ನ ಡೇಂಜರಸ್ ಬ್ಯಾಟ್ಸ್ಮನ್ ಪ್ರಸ್ತುತ ಪಂಜಾಬ್ ಕಿಂಗ್ಸ್ ಪರ 3ನೇ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಇದಕ್ಕೂ ಮುನ್ನ ಗೇಲ್ ಕೆಕೆಆರ್, ಆರ್ಸಿಬಿ ಹಾಗೂ ಪಂಜಾಬ್ ಪರ ಇನಿಂಗ್ಸ್ ಆರಂಭಿಸಿದ್ದರು. ಈ ವೇಳೆ ಆರಂಭಿಕರಾಗಿ 6 ಶತಕಗಳೊಂದಿಗೆ ಒಟ್ಟು 4480 ರನ್ ಗಳಿಸಿದ್ದಾರೆ. ಈ ಮೂಲಕ ಐಪಿಎಲ್ನ ಬೆಸ್ಟ್ ಓಪನರ್ಗಳ ಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ.