IPL 2022: ಹರಾಜಿನಲ್ಲಿ ಕೋಟಿ ಕೋಟಿ ಸಂಭಾವನೆ ಪಡೆದು ಮೊದಲ ಪಂದ್ಯದಲ್ಲೇ ಶೂನ್ಯ ಸುತ್ತಿದ ಸ್ಟಾರ್​ ಬ್ಯಾಟರ್​ಗಳಿವರು!

IPL 2022: ಐಪಿಎಲ್​ನ ಮೊದಲ ಐದು ಪಂದ್ಯಗಳಲ್ಲಿ ಒಟ್ಟು 8 ಬ್ಯಾಟ್ಸ್​ ಮನ್​ಗಳು ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ಇವರಲ್ಲಿ ಹೆಚ್ಚಿನವರು ಹರಾಜಿನಲ್ಲಿ ಕೋಟಿ ಕೋಟಿ ಸಂಭಾವನೆ ಪಡೆದವರಾಗಿದ್ದಾರೆ.

ಪೃಥ್ವಿಶಂಕರ
|

Updated on:Mar 31, 2022 | 4:48 PM

ಐಪಿಎಲ್ 2022 ರಲ್ಲಿ ನಾವು ಇಲ್ಲಿಯವರೆಗೆ ಸಾಕಷ್ಟು ಬಿರುಗಾಳಿ ಬ್ಯಾಟಿಂಗ್ ನೋಡಿದ್ದೇವೆ. ಓಡಿನ್ ಸ್ಮಿತ್ ತಮ್ಮ ಪವರ್ ಹಿಟ್ಟಿಂಗ್, ಸಂಜು ಸ್ಯಾಮ್ಸನ್ ಅವರ ಅದ್ಭುತ ಬ್ಯಾಟಿಂಗ್ ಮತ್ತು ದೀಪಕ್ ಹೂಡಾ ಅವರ ವೇಗದ ಹೊಡೆತಗಳಿಂದ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಆದಾಗ್ಯೂ, ಲೀಗ್‌ನ ಮೊದಲ ಪಂದ್ಯದಲ್ಲಿ ಖಾತೆ ತೆರೆಯಲು ವಿಫಲರಾದ ಕೆಲವು ಆಟಗಾರರೂ ಇದ್ದರು.

1 / 5
ಐಪಿಎಲ್ 2022 ರ ಮೊದಲ ಐದು ಪಂದ್ಯಗಳಲ್ಲಿ ಒಟ್ಟು 8 ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ಇವರಲ್ಲಿ ಹಲವು ಬ್ಯಾಟ್ಸ್‌ಮನ್‌ಗಳು ಕೋಟಿ ಕೋಟಿ ಸಂಭಾವನೆ ಪಡೆಯುವವರ ಪಟ್ಟಿಯಲ್ಲಿದ್ದಾರೆ.

2 / 5
ಐಪಿಎಲ್ 2022 ರಲ್ಲಿ ಮೊದಲ ಎಸೆತಕ್ಕೆ ಇಬ್ಬರು ಬ್ಯಾಟ್ಸ್‌ಮನ್‌ಗಳು ಔಟಾದರು. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೊದಲ ಎಸೆತದಲ್ಲೇ ಔಟಾದ ಲಕ್ನೋ ಸೂಪರ್‌ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಇದರಲ್ಲಿ ಪ್ರಮುಖ ಹೆಸರು. ಪಂಜಾಬ್ ಕಿಂಗ್ಸ್ ಬ್ಯಾಟ್ಸ್‌ಮನ್ ರಾಜ್ ಬಾವಾ ಕೂಡ ಆರ್‌ಸಿಬಿ ವಿರುದ್ಧ ಮೊದಲ ಎಸೆತದಲ್ಲೇ ಪೆವಿಲಿಯನ್ ಸೇರಿದ್ದರು.

3 / 5
ಕೆಕೆಆರ್ ವಿರುದ್ಧದ ಪಂದ್ಯದ ನಾಲ್ಕನೇ ಎಸೆತಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ ರಿತುರಾಜ್ ಗಾಯಕ್ವಾಡ್​ಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ದೆಹಲಿ ಕ್ಯಾಪಿಟಲ್ಸ್ ತಂಡದ ಇಬ್ಬರು ಬ್ಯಾಟ್ಸ್‌ಮನ್‌ಗಳಾದ ಮನದೀಪ್ ಸಿಂಗ್ ಮತ್ತು ರೋವ್‌ಮನ್ ಪೊವೆಲ್ ಇಬ್ಬರೂ ಮುಂಬೈ ಇಂಡಿಯನ್ಸ್ ವಿರುದ್ಧ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

4 / 5
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಖಾತೆ ತೆರೆಯದೆ ಪೆವಿಲಿಯನ್‌ ಸೇರಿದ್ದರು. ಮತ್ತೊಂದೆಡೆ, ಸನ್‌ರೈಸರ್ಸ್ ಹೈದರಾಬಾದ್‌ನ ನಿಕೋಲಸ್ ಪೂರನ್ ಮತ್ತು ರಾಹುಲ್ ತ್ರಿಪಾಠಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಶೂನ್ಯ ಸೂತ್ತಿದ್ದರು.

5 / 5

Published On - 4:38 pm, Thu, 31 March 22

Follow us
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು