KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
IPL 2022: ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಅಂತಿಮವಾಗಿ 103 ರನ್ಗಳಿಸಿ ಔಟಾದರು. ಈ ಭರ್ಜರಿ ಇನಿಂಗ್ಸ್ನಲ್ಲಿ ರಾಹುಲ್ ಬ್ಯಾಟ್ನಿಂದ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳು ಮೂಡಿಬಂದಿತ್ತು.
Updated on: Apr 16, 2022 | 5:28 PM

ಐಪಿಎಲ್ನ 26ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿಶೇಷ ಎಂದರೆ ಇದು ಐಪಿಎಲ್ನಲ್ಲಿ ಕೆಎಲ್ ರಾಹುಲ್ ಅವರ ನೂರನೇ ಪಂದ್ಯ. ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ಕೆಎಲ್ ರಾಹುಲ್ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಕೆಎಲ್ ರಾಹುಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ವಿರುದ್ದ 2 ಶತಕ ಬಾರಿಸಿದ ಏಕೈಕ ಆಟಗಾರ ಎಂಬ ದಾಖಲೆಯನ್ನು ರಾಹುಲ್ ಬರೆದರು.

ಅಷ್ಟೇ ಅಲ್ಲದೆ ಐಪಿಎಲ್ನಲ್ಲಿ ಒಂದೇ ತಂಡದ ವಿರುದ್ದ 2 ಬಾರಿಸಿದ 4ನೇ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಕ್ರಿಸ್ ಗೇಲ್ (ಪಂಜಾಬ್ ವಿರುದ್ದ), ವಿರಾಟ್ ಕೊಹ್ಲಿ (ಗುಜರಾತ್ ಲಯನ್ಸ್), ಡೇವಿಡ್ ವಾರ್ನರ್ (ಕೆಕೆಆರ್ ವಿರುದ್ದ) 2 ಶತಕ ಬಾರಿಸಿದ್ದರು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ ಶತಕ ಬಾರಿಸುವ ಮೂಲಕ ಈ ವಿಶೇಷ ಸಾಧಕರ ಪಟ್ಟಿಗೆ ರಾಹುಲ್ ಕೂಡ ಸೇರ್ಪಡೆಯಾಗಿದ್ದಾರೆ.

ಇದಲ್ಲದೆ ಐಪಿಎಲ್ನಲ್ಲಿ 2 ಶತಕ ಬಾರಿಸಿದ 2ನೇ ನಾಯಕ ಎಂಬ ದಾಖಲೆಯನ್ನೂ ಕೂಡ ಕೆಎಲ್ ರಾಹುಲ್ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ 5 ಶತಕ ಬಾರಿಸಿರುವ ಆರ್ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ.

ಇನ್ನು ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಅಂತಿಮವಾಗಿ 103 ರನ್ಗಳಿಸಿ ಔಟಾದರು. ಈ ಭರ್ಜರಿ ಇನಿಂಗ್ಸ್ನಲ್ಲಿ ರಾಹುಲ್ ಬ್ಯಾಟ್ನಿಂದ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳು ಮೂಡಿಬಂದಿತ್ತು. ನಾಯಕನ ಈ ಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿದೆ.



















