KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

| Updated By: ಝಾಹಿರ್ ಯೂಸುಫ್

Updated on: Apr 16, 2022 | 5:28 PM

IPL 2022: ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಅಂತಿಮವಾಗಿ 103 ರನ್​ಗಳಿಸಿ ಔಟಾದರು. ಈ ಭರ್ಜರಿ ಇನಿಂಗ್ಸ್​ನಲ್ಲಿ ರಾಹುಲ್ ಬ್ಯಾಟ್​ನಿಂದ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳು ಮೂಡಿಬಂದಿತ್ತು.

1 / 5
ಐಪಿಎಲ್​ನ 26ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿಶೇಷ ಎಂದರೆ ಇದು ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಅವರ ನೂರನೇ ಪಂದ್ಯ. ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ಕೆಎಲ್ ರಾಹುಲ್ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಈ ಪಂದ್ಯದಲ್ಲಿ ಕೆಎಲ್ ರಾಹುಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ವಿರುದ್ದ 2 ಶತಕ ಬಾರಿಸಿದ ಏಕೈಕ ಆಟಗಾರ ಎಂಬ ದಾಖಲೆಯನ್ನು ರಾಹುಲ್ ಬರೆದರು.

3 / 5
 ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ದ 2 ಬಾರಿಸಿದ 4ನೇ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಕ್ರಿಸ್ ಗೇಲ್ (ಪಂಜಾಬ್ ವಿರುದ್ದ), ವಿರಾಟ್ ಕೊಹ್ಲಿ (ಗುಜರಾತ್ ಲಯನ್ಸ್), ಡೇವಿಡ್ ವಾರ್ನರ್ (ಕೆಕೆಆರ್​ ವಿರುದ್ದ) 2 ಶತಕ ಬಾರಿಸಿದ್ದರು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ ಶತಕ ಬಾರಿಸುವ ಮೂಲಕ ಈ ವಿಶೇಷ ಸಾಧಕರ ಪಟ್ಟಿಗೆ ರಾಹುಲ್ ಕೂಡ ಸೇರ್ಪಡೆಯಾಗಿದ್ದಾರೆ.

4 / 5
ಇದಲ್ಲದೆ ಐಪಿಎಲ್​ನಲ್ಲಿ 2 ಶತಕ ಬಾರಿಸಿದ 2ನೇ ನಾಯಕ ಎಂಬ ದಾಖಲೆಯನ್ನೂ ಕೂಡ ಕೆಎಲ್ ರಾಹುಲ್ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ 5 ಶತಕ ಬಾರಿಸಿರುವ ಆರ್​ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ.

5 / 5
ಇನ್ನು ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಅಂತಿಮವಾಗಿ 103 ರನ್​ಗಳಿಸಿ ಔಟಾದರು. ಈ ಭರ್ಜರಿ ಇನಿಂಗ್ಸ್​ನಲ್ಲಿ ರಾಹುಲ್ ಬ್ಯಾಟ್​ನಿಂದ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳು ಮೂಡಿಬಂದಿತ್ತು. ನಾಯಕನ ಈ ಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್​ ತಂಡವು 20 ಓವರ್​ನಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್​ ಕಲೆಹಾಕಿದೆ.