IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

Edited By:

Updated on: Mar 08, 2022 | 8:30 PM

IPL 2022 AB de Villiers: ಈ ಹಿಂದೆಯೇ ಈ ಬಗ್ಗೆ ಮಾಹಿತಿ ನೀಡಿದ್ದ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ.

1 / 7
ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ವರ್ಷವಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

2 / 7
ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

3 / 7
ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

4 / 7
ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಮೆಂಟರ್​ ರೂಪದಲ್ಲಿ ಎಂಬುದು ವಿಶೇಷ.

5 / 7
ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಮೆಂಟರ್ ಆಗುವ ಸಾಧ್ಯತೆಯಿದೆ.  ವರದಿಗಳ ಪ್ರಕಾರ, RCB ಎಬಿಡಿಯನ್ನು ಮೆಂಟರ್ ಆಗಿ  ನೇಮಿಸಲು ಉತ್ಸುಕವಾಗಿದೆ. ಹೀಗಾಗಿ ಮತ್ತೊಮ್ಮೆ ಆರ್​ಸಿಬಿ ಜೊತೆ ಎಬಿ ಡಿವಿಲಿಯರ್ಸ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

6 / 7
ಈ ಹಿಂದೆಯೇ ಈ ಬಗ್ಗೆ ಮಾಹಿತಿ ನೀಡಿದ್ದ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಅಂತಹ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದರು.

7 / 7
ಈ ಮೂಲಕ ಎಬಿಡಿಯನ್ನು ಆರ್​ಸಿಬಿ ಬಳಗಕ್ಕೆ ಕರೆತರುವ ಸೂಚನೆ ನೀಡಿದ್ದರು.  ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಮೆಂಟರ್ ಆಗಿ ಅಥವಾ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.