IPL 2022: ಡೆಲ್ಲಿ ಕ್ಯಾಪಿಟಲ್ಸ್ ನಾಲ್ವರು ಫೈನಲ್: ಸ್ಟಾರ್ ಆಟಗಾರರು ರಿಲೀಸ್
IPL 2022 Delhi Capitals: ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಲಿದ್ದು, ಜೊತೆಗೆ ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ.
Updated on: Nov 25, 2021 | 10:49 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಪ್ರಸ್ತುತ ತಂಡದ ನಾಯಕ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಳ್ಳಲಿದೆ. ಹಾಗಿದ್ರೆ ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು ಯಾರೆಂದು ನೋಡೋಣ...

ಅಷ್ಟೇ ಅಲ್ಲದೆ ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಲಿದ್ದು, ಜೊತೆಗೆ ಆರ್ ಅಶ್ವಿನ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ. ಹಾಗಿದ್ರೆ ಡೆಲ್ಲಿ ತಂಡವು ಉಳಿಸಿಕೊಳ್ಳಲಿರುವ ನಾಲ್ವರು ಆಟಗಾರರು ಯಾರೆಂದು ನೋಡುವುದಾದರೆ....

ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಪಂತ್ ಅವರನ್ನೇ ಮುಂದುವರೆಸಲು ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಪಂತ್ ಅವರನ್ನು ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡಿದೆ.

ಪೃಥ್ವಿ ಶಾ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಅವರನ್ನೂ ಕೂಡ ರಿಟೈನ್ ಮಾಡಿಕೊಂಡಿದೆ.

ಅಕ್ಷರ್ ಪಟೇಲ್: ಯುವ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

ಅನ್ರಿಕ್ ನೋಕಿಯಾ: ಇನ್ನು ವಿದೇಶಿ ಕೋಟಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಗಿಸೊ ರಬಾಡ ಬದಲಿಗೆ ಅನ್ರಿಕ್ ನೋಕಿಯಾರನ್ನು ಉಳಿಸಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್
