ಮುಂಬೈ ಇಂಡಿಯನ್ಸ್ ತಂಡದಿಂದ ಪಾಂಡ್ಯ ಬ್ರದರ್ಸ್ ಹೊರಬೀಳುವುದು ಖಚಿತವಾಗಿದೆ. ಮೆಗಾ ಹರಾಜಿಗೂ ಮುನ್ನ ಮುಂಬೈ ರೋಹಿತ್ ಶರ್ಮಾ, ಬುಮ್ರಾ, ಇಶಾನ್ ಕಿಶನ್ ಹಾಗೂ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆದರೆ ಇತ್ತ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಹೊರಬೀಳಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಹೊಸ ಫ್ರಾಂಚೈಸಿ ಇಬ್ಬರನ್ನು ಸಂಪರ್ಕಿಸಿದೆ ಎಂದು ವರದಿಯೊಂದು ತಿಳಿಸಿದೆ.