- Kannada News Photo gallery Cricket photos IPL 2022 Josh Hazlewood unlikely to be available for RCB until match against CSK on12th April
IPL 2022: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ 2 ಪಂದ್ಯಗಳಿಗೆ ಅಲಭ್ಯ
IPL 2022 RCB Team: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ
Updated on: Apr 05, 2022 | 4:25 PM

ಐಪಿಎಲ್ ಸೀಸನ್ 15 ನ ಆರಂಭಿಕ ಪಂದ್ಯಗಳಿಗೆ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಅಲಭ್ಯರಾಗಿದ್ದರು. ಅದರಂತೆ ಆರ್ಸಿಬಿ ತಂಡದಲ್ಲಿದ್ದ ಆಸೀಸ್ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಹ್ಯಾಝಲ್ವುಡ್ ಹಾಗೂ ಜೇಸನ್ ಬೆಹ್ರೆಡ್ರಾರ್ಫ್ ಮೊದಲ ಮೂರು ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ.

ಇದೀಗ ಗ್ಲೆನ್ ಮ್ಯಾಕ್ಸ್‌ವೆಲ್ ಆರ್ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದ ಮೂಲಕ ಕಣಕ್ಕಿಳಿಯಲಿದ್ದಾರೆ. ಇದಾಗ್ಯೂ ಜೋಶ್ ಹ್ಯಾಝಲ್ವುಡ್ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪಾಕಿಸ್ತಾನದಲ್ಲಿರುವ ಹ್ಯಾಝಲ್ವುಡ್ ಭಾರತಕ್ಕೆ ಬರಲು ಇನ್ನೆರೆಡು ದಿನಗಳಾಗಲಿವೆ ಎಂದು ವರದಿಯಾಗಿದೆ.

ಇನ್ನು ಎರಡು ದಿನಗಳ ಬಳಿಕ ಭಾರತಕ್ಕೆ ಬಂದರೂ 3 ದಿನ ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ. ಹೀಗಾಗಿ ಏಪ್ರಿಲ್ 9 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯಕ್ಕೆ ಹ್ಯಾಝಲ್ವುಡ್ ಅಲಭ್ಯರಾಗಲಿದ್ದಾರೆ. ಅಷ್ಟೇ ಅಲ್ಲದೆ ಏಪ್ರಿಲ್ 12 ರ ವೇಳೆಗೆ ಆರ್ಸಿಬಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಹೀಗಾಗಿ ಹ್ಯಾಝಲ್ವುಡ್ ಸಿಎಸ್ಕೆ ವಿರುದ್ದದ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಲಿದ್ದಾರೆ.

ವಿಶೇಷ ಎಂದರೆ ಜೋಶ್ ಹ್ಯಾಝಲ್ವುಡ್ ಕಳೆದ ಸೀಸನ್ನಲ್ಲಿ ಸಿಎಸ್ಕೆ ತಂಡದಲ್ಲಿದ್ದರು. ಇದೀಗ ಐಪಿಎಲ್ ಸೀಸನ್ 15 ನಲ್ಲಿ ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 12 ರಂದು ಆಡುವ ಸಾಧ್ಯತೆಯಿದೆ. ಅಂದರೆ ಸಿಎಸ್ಕೆ ವಿರುದ್ದದ ಪಂದ್ಯದ ಮೂಲಕ ಜೋಶ್ ಹ್ಯಾಝಲ್ವುಡ್ ಐಪಿಎಲ್ ಅಭಿಯಾನ ಆರಂಭಿಸುವ ಸಾಧ್ಯತೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.




