IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..!
IPL 2022 RCB Team: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹ್ಯಾಝಲ್ ವುಡ್.
Updated on: Feb 14, 2022 | 2:37 PM

ಐಪಿಎಲ್ ಸೀಸನ್ 15 ಮೆಗಾ ಹರಾಜಿನ ಮೂಲಕ ಆರ್ಸಿಬಿ ತಂಡವು ಒಟ್ಟು 19 ಆಟಗಾರರನ್ನು ಖರೀದಿಸಿದೆ. ಇನ್ನು ಇದಕ್ಕೂ ಮುನ್ನ ಮೂವರು ಆಟಗಾರರನ್ನು ಆರ್ಸಿಬಿ ರಿಟೈನ್ ಮಾಡಿಕೊಂಡಿತ್ತು. ಅದರಂತೆ ಇದೀಗ ಆರ್ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ವಿಶೇಷ ಎಂದರೆ ಈ ಬಾರಿ ಆರ್ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದಾರೆ.

ಹೌದು, ಆರ್ಸಿಬಿ ತಂಡವು 40 ಲಕ್ಷ ರೂ. ನೀಡಿ ಇಬ್ಬರು ಕನ್ನಡಿಗರನ್ನು ಆಯ್ಕೆ ಮಾಡಿಕೊಂಡಿದೆ. ಆರ್ಸಿಬಿ ತಂಡಕ್ಕೆ ಕರ್ನಾಟಕ ಯುವ ಆಟಗಾರ ಅನೀಶ್ವರ್ ಗೌತಮ್ ಆಯ್ಕೆಯಾಗಿದ್ದಾರೆ. 19 ವರ್ಷದ ಅನೀಶ್ವರ್ ಈ ಹಿಂದೆ ಅಂಡರ್ 19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಕರ್ನಾಟಕ ಪರ ಕೂಡ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಆರ್ಸಿಬಿ ಅನೀಶ್ವರ್ ಗೌತಮ್ ಅವರನ್ನು 20 ಲಕ್ಷ ರೂ.ಗೆ ಖರೀದಿಸಿದೆ.

ಅಷ್ಟೇ ಅಲ್ಲದೆ ಅಂತಿಮ ಸುತ್ತಿನಲ್ಲಿ ಲವ್ನೀತ್ ಸಿಸೋಡಿಯಾ ಅವರನ್ನು ಕೂಡ ಆರ್ಸಿಬಿ ಖರೀದಿಸಿತು. ಲವನೀತ್ ಕೂಡ ಕರ್ನಾಟಕದ ಆಟಗಾರನಾಗಿದ್ದು, ಈ ಹಿಂದೆ ಕರ್ನಾಟಕ ಪರ 14 ಟಿ20 ಪಂದ್ಯಗಳನ್ನಾಡಿದ್ದಾರೆ. 22 ವರ್ಷದ ಲವನೀತ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂಬುದು ಮತ್ತೊಂದು ವಿಶೇಷ. ಅದರಂತೆ ಇದೀಗ ಆರ್ಸಿಬಿ ತಂಡದಲ್ಲಿ ಈ ಬಾರಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ.

ಈ ಬಾರಿ ಆರ್ಸಿಬಿ ಮೆಗಾ ಹರಾಜಿನ ಮೂಲಕ 7 ವಿದೇಶಿ ಆಟಗಾರರನ್ನು ಖರೀದಿಸಿದೆ. ಅದರಂತೆ ಇದೀಗ ಆರ್ಸಿಬಿ ತಂಡದಲ್ಲಿ ಒಟ್ಟು 8 ವಿದೇಶಿ ಆಟಗಾರರು ಸೇರಿದಂತೆ 22 ಸದಸ್ಯರಿದ್ದಾರೆ.

ಆರ್ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಾಶ್ ಪ್ರಭುದೇಸಾಯ್, ಚಾಮಾ ಮಿಲಿಂದ್, ಅನೀಶ್ವರ್ ಗೌತಮ್, ಕರಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.



















