AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಕೆಎಲ್ ರಾಹುಲ್

Ipl 2022 kl rahul: ಕೆಎಲ್ ರಾಹುಲ್ ಅವರ ಬ್ಯಾಟ್​ನಿಂದ ಒಟ್ಟು 5 ಶತಕಗಳು ಮತ್ತು 50 ಅರ್ಧ ಶತಕಗಳು ಮೂಡಿಬಂದಿವೆ. ಈ ಮೂಲಕ 6 ಸಾವಿರ ರನ್ ಪೂರೈಸಿ ಹೊಸ ದಾಖಲೆ ಬರೆದಿದ್ದಾರೆ.

TV9 Web
| Edited By: |

Updated on: Apr 20, 2022 | 6:31 PM

Share
ಕೆಎಲ್ ರಾಹುಲ್ ಪ್ರಸ್ತುತ ಯುಗದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂಬುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ರಾಹುಲ್ ಮೂರೂ ಮಾದರಿಯಲ್ಲೂ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಟೆಸ್ಟ್, ಏಕದಿನ ಹೊರತಾಗಿ ಟಿ20ಯಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಮಂಗಳವಾರ ಕೆಎಲ್ ರಾಹುಲ್ ಆರ್​ಸಿಬಿ ವಿರುದ್ಧ 30 ರನ್‌ಗಳ ಇನ್ನಿಂಗ್ಸ್‌ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ.

1 / 5
ಕೆಎಲ್ ರಾಹುಲ್ ಟಿ20 ಕ್ರಿಕೆಟ್‌ನಲ್ಲಿ 6000 ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6 ಸಾವಿರ ರನ್ ಪೂರೈಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ​ 184 ಇನ್ನಿಂಗ್ಸ್‌ಗಳಲ್ಲಿ 6 ಸಾವಿರ ರನ್ ಪೂರೈಸಿದ್ದರು. ಇದೀಗ ಕೆಎಲ್ ರಾಹುಲ್ 179 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

2 / 5
ಈ ಭರ್ಜರಿ ಬ್ಯಾಟಿಂಗ್​ನಲ್ಲಿ ಕೆಎಲ್ ರಾಹುಲ್ ಅವರ ಬ್ಯಾಟ್​ನಿಂದ ಒಟ್ಟು 5 ಶತಕಗಳು ಮತ್ತು 50 ಅರ್ಧ ಶತಕಗಳು ಮೂಡಿಬಂದಿವೆ. ಈ ಮೂಲಕ 6 ಸಾವಿರ ರನ್ ಪೂರೈಸಿ ಹೊಸ ದಾಖಲೆ ಬರೆದಿದ್ದಾರೆ.

3 / 5
ಇನ್ನು ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 6000 ರನ್ ಗಳಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ.  ಕ್ರಿಸ್ ಗೇಲ್ ಕೇವಲ 162 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

4 / 5
 ಹಾಗೆಯೇ ಪಾಕ್ ನಾಯಕ ಬಾಬರ್ ಆಜಮ್ ಕೂಡ ಕೆಎಲ್ ರಾಹುಲ್ ಗಿಂತ ಮುಂದಿದ್ದಾರೆ. ಬಾಬರ್ ಅಜಮ್ 165 ಇನ್ನಿಂಗ್ಸ್‌ಗಳಲ್ಲಿ 6000 ಟಿ20 ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6 ಸಾವಿರ ರನ್ ಪೂರೈಸಿದ ಏಷ್ಯಾದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಬಾಬರ್ ಆಜಂ ಬರೆದಿದ್ದಾರೆ.

5 / 5