ಕೆಎಲ್ ರಾಹುಲ್ ಪ್ರಸ್ತುತ ಯುಗದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂಬುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ರಾಹುಲ್ ಮೂರೂ ಮಾದರಿಯಲ್ಲೂ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಟೆಸ್ಟ್, ಏಕದಿನ ಹೊರತಾಗಿ ಟಿ20ಯಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಮಂಗಳವಾರ ಕೆಎಲ್ ರಾಹುಲ್ ಆರ್ಸಿಬಿ ವಿರುದ್ಧ 30 ರನ್‌ಗಳ ಇನ್ನಿಂಗ್ಸ್‌ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ.
ಕೆಎಲ್ ರಾಹುಲ್ ಟಿ20 ಕ್ರಿಕೆಟ್‌ನಲ್ಲಿ 6000 ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 6 ಸಾವಿರ ರನ್ ಪೂರೈಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ 184 ಇನ್ನಿಂಗ್ಸ್‌ಗಳಲ್ಲಿ 6 ಸಾವಿರ ರನ್ ಪೂರೈಸಿದ್ದರು. ಇದೀಗ ಕೆಎಲ್ ರಾಹುಲ್ 179 ಇನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಈ ಭರ್ಜರಿ ಬ್ಯಾಟಿಂಗ್ನಲ್ಲಿ ಕೆಎಲ್ ರಾಹುಲ್ ಅವರ ಬ್ಯಾಟ್ನಿಂದ ಒಟ್ಟು 5 ಶತಕಗಳು ಮತ್ತು 50 ಅರ್ಧ ಶತಕಗಳು ಮೂಡಿಬಂದಿವೆ. ಈ ಮೂಲಕ 6 ಸಾವಿರ ರನ್ ಪೂರೈಸಿ ಹೊಸ ದಾಖಲೆ ಬರೆದಿದ್ದಾರೆ.
ಇನ್ನು ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 6000 ರನ್ ಗಳಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಕ್ರಿಸ್ ಗೇಲ್ ಕೇವಲ 162 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಹಾಗೆಯೇ ಪಾಕ್ ನಾಯಕ ಬಾಬರ್ ಆಜಮ್ ಕೂಡ ಕೆಎಲ್ ರಾಹುಲ್ ಗಿಂತ ಮುಂದಿದ್ದಾರೆ. ಬಾಬರ್ ಅಜಮ್ 165 ಇನ್ನಿಂಗ್ಸ್‌ಗಳಲ್ಲಿ 6000 ಟಿ20 ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 6 ಸಾವಿರ ರನ್ ಪೂರೈಸಿದ ಏಷ್ಯಾದ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ಬಾಬರ್ ಆಜಂ ಬರೆದಿದ್ದಾರೆ.