Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜಿನಲ್ಲಿ ಅಂಡರ್ 19 ವಿಶ್ವಕಪ್​ ಸ್ಟಾರ್ ಆಟಗಾರರು..!

IPL 2022 Mega Auction: ಈ ಯುವ ಆಟಗಾರರು ಈಗ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ IPL 2022 ಮೆಗಾ ಹರಾಜಿನ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಅಂಡರ್-19 ವಿಶ್ವಕಪ್‌ನಲ್ಲಿ ಮಿಂಚಿದ 5 ಆಟಗಾರರ ಖರೀದಿಗೂ ಫ್ರಾಂಚೈಸಿಗಳು ಹೆಚ್ಚಿನ ಆಸಕ್ತಿ ತೋರಬಹುದು. ಆ ಆಟಗಾರರು ಯಾರೆಲ್ಲಾ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on:Feb 08, 2022 | 2:31 PM

2022 ರ ಅಂಡರ್-19 ವಿಶ್ವಕಪ್‌ನಲ್ಲಿ ಅನೇಕ ಯುವ ಆಟಗಾರರು ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾದ 'ಯಂಗಿಸ್ತಾನ್' ತಂಡ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ 5ನೇ ಬಾರಿ ಟ್ರೋಫಿ ವಶಪಡಿಸಿಕೊಂಡಿದೆ. ನಾಯಕನಾಗಿ ಯಶ್ ಧುಲ್ ತಂಡವನ್ನು ಅದ್ಭುತವಾಗಿ ಮುನ್ನಡೆಸಿದರು. ವಿಶ್ವಕಪ್ ನಂತರ, ಈ ಯುವ ಆಟಗಾರರು ಈಗ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ IPL 2022 ಮೆಗಾ ಹರಾಜಿನ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಅಂಡರ್-19 ವಿಶ್ವಕಪ್‌ನಲ್ಲಿ ಮಿಂಚಿದ 5 ಆಟಗಾರರ ಖರೀದಿಗೂ ಫ್ರಾಂಚೈಸಿಗಳು ಹೆಚ್ಚಿನ ಆಸಕ್ತಿ ತೋರಬಹುದು. ಆ ಆಟಗಾರರು ಯಾರೆಲ್ಲಾ ನೋಡೋಣ...

1 / 6
ಡೆವಾಲ್ಡ್ ಬ್ರೆವಿಸ್: ದಕ್ಷಿಣ ಆಫ್ರಿಕಾದ ಯುವ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ 2022 ರ ಅಂಡರ್-19 ವಿಶ್ವಕಪ್‌ನ 6 ಪಂದ್ಯಗಳಲ್ಲಿ ಗರಿಷ್ಠ 506 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಬೇಬಿ ಡಿವಿಲಿಯರ್ಸ್ ಎಂದು ಜನಪ್ರಿಯವಾಗಿರುವ ಬ್ರೆವಿಸ್, ಐಪಿಎಲ್ ಮೆಗಾ ಹರಾಜಿನಲ್ಲಿ ತಮ್ಮ ಮೂಲ ಬೆಲೆಯನ್ನು 20 ಲಕ್ಷ ರೂ. ಎಂದು ಘೋಷಿಸಿದ್ದಾರೆ.

2 / 6
ರಾಜ್ ಅಂಗದ್ ಬಾವಾ: ಅಂಡರ್-19 ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಲ್‌ರೌಂಡರ್ ಆಗಿ ರಾಜ್ ಅಂಗದ್ ಬಾವಾ ಹೊರಹೊಮ್ಮಿದ್ದಾರೆ. ಬಾವಾ 6 ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ. ಹಾಗೆಯೇ 6 ಪಂದ್ಯಗಳಲ್ಲಿ ಒಟ್ಟು 252 ರನ್ ಗಳಿಸಿದ್ದಾರೆ. ಇದೀಗ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಅಂಗದ್ ಬಾವಾ ಕೂಡ ಮೆಗಾ ಹರಾಜಿನಲ್ಲಿದ್ದಾರೆ.

3 / 6
 ಯಶ್ ಧುಲ್: ಭಾರತದ ಅಂಡರ್-19 ವಿಶ್ವಕಪ್ ತಂಡದ ನಾಯಕ ಯಶ್ ಧುಲ್ ಅವರಿಗೆ ಈ ಟೂರ್ನಿ ಅದ್ಭುತವಾಗಿತ್ತು. ಧುಲ್ 4 ಪಂದ್ಯಗಳಲ್ಲಿ 1 ಶತಕ ಮತ್ತು 1 ಅರ್ಧಶತಕದೊಂದಿಗೆ ಒಟ್ಟು 229 ರನ್ ಗಳಿಸಿದರು. ಸೆಮಿಫೈನಲ್‌ನಲ್ಲಿ ಧುಲ್ ಶತಕ ಬಾರಿಸುವ ವಿರಾಟ್ ಕೊಹ್ಲಿ ಮತ್ತು ಉನ್ಮುಕ್ತ್ ಚಂದ್ ದಾಖಲೆಯನ್ನೂ ಸರಿಗಟ್ಟಿದ್ದರು. ಇದೀಗ ಧುಲ್ ಮೂಲ ಬೆಲೆ 20 ಲಕ್ಷ ರೂ. ನೊಂದಿಗೆ ಐಪಿಎಲ್ ಮೆಗಾ ಹರಾಜಿನಲ್ಲಿದ್ದಾರೆ.

4 / 6
ವಿಕಿ ಒಸ್ತ್ವಾಲ್: 2022 ರ ಅಂಡರ್-19 ವಿಶ್ವಕಪ್‌ನಲ್ಲಿ ವಿಕಿ ಒಸ್ತ್ವಾಲ್ ಮಿಸ್ಟ್ರಿ ಸ್ಪಿನ್ನರ್ ಆಗಿ ಹೊರಹೊಮ್ಮಿದರು. ಒಸ್ತ್ವಾಲ್ 6 ಪಂದ್ಯಗಳಲ್ಲಿ ಒಟ್ಟು 12 ವಿಕೆಟ್ ಪಡೆದು ಮಿಂಚಿದ್ದಾರೆ. ಐಪಿಎಲ್ ಹರಾಜಿನಲ್ಲಿ 20 ಲಕ್ಷ ಮೂಲ ಬೆಲೆ ಹೊಂದಿರುವ ಓಸ್ತ್ವಾಲ್ ಮೇಲೆ ಕೆಲ ಫ್ರಾಂಚೈಸಿಗಳು ಕಣ್ಣಿಟ್ಟಿದೆ.

5 / 6
ಹರ್ನೂರ್ ಸಿಂಗ್: ಅಂಡರ್-19 ವಿಶ್ವಕಪ್‌ನಲ್ಲಿ ಹರ್ನೂರ್ ಸಿಂಗ್ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಆದರೆ ಈ ಯುವ ಬ್ಯಾಟ್ಸ್‌ಮನ್ ದೊಡ್ಡ ಇನ್ನಿಂಗ್ಸ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹರ್ನೂರ್ 6 ಪಂದ್ಯಗಳಲ್ಲಿ 141 ರನ್ ಗಳಿಸಿದ್ದರು. 19 ವರ್ಷದ ಎಡಗೈ ಬ್ಯಾಟ್ಸ್‌ಮನ್ ಹರ್ನೂರ್ ಸಿಂಗ್ ಐಪಿಎಲ್ ಹರಾಜಿನಲ್ಲಿ ತಮ್ಮ ಮೂಲ ಬೆಲೆಯನ್ನು 20 ಲಕ್ಷ ರೂ. ಎಂದು ಘೋಷಿಸಿದ್ದು, ಹೀಗಾಗಿ ಮೆಗಾ ಹರಾಜಿನಲ್ಲಿ ಯುವ ಆಟಗಾರ ಬಿಕರಿಯಾದರೂ ಅಚ್ಚರಿಪಡಬೇಕಿಲ್ಲ.

6 / 6

Published On - 2:30 pm, Tue, 8 February 22

Follow us
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ

ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು

ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ

ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ

ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ