AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯಾವ ತಂಡದ ಪರ ಆಡುತ್ತೀರಿ? ಸುಳಿವು ನೀಡಿದ ಅಶ್ವಿನ್

IPL 2022 Mega Auctions: ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್|

Updated on: Dec 18, 2021 | 2:56 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಎಲ್ಲಾ ತಂಡಗಳು ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಈಗಾಗಲೇ 8 ಫ್ರಾಂಚೈಸಿ 27 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಸೀಸನ್​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ.

1 / 5
 ಹೀಗಾಗಿಯೇ ಅಶ್ವಿನ್ ಅವರು ಮುಂದಿನ ಸೀಸನ್​ನಲ್ಲಿ ಯಾರ ಪರ ಆಡಲಿದ್ದಾರೆ ಎಂಬ ಪ್ರಶ್ನೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. ಇದೀಗ ಮತ್ತೆ ಯಾವ ತಂಡದ ಪರ ಆಡುತ್ತೀರಿ ಎಂಬ ಪ್ರಶ್ನೆಯೊಂದನ್ನು ಅಶ್ವಿನ್ ಅವರ ಮುಂದಿಡಲಾಗಿದೆ.

2 / 5
ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿರುವ ಅಶ್ವಿನ್,  ಚೆನ್ನೈ ಸೂಪರ್ ಕಿಂಗ್ಸ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರದ ತಂಡ. ಆ ತಂಡ ನನಗೆ ಶಾಲೆಯಿದ್ದಂತೆ. ಇಲ್ಲಿ ನಾನು ಪ್ರಿ ಕೆಜಿ, ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಯ ಶಿಕ್ಷಣವನ್ನು ತೆಗೆದುಕೊಂಡಿದ್ದೆ. ಆ ಬಳಿಕ ನಾನು ಬೇರೆ ಶಾಲೆಗೆ ಹೋದೆ. ಇದೀಗ ನನಗೂ ಮತ್ತೆ ಮನೆಗೆ ಬರಲು ಇಚ್ಛಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಂದರೆ ಮತ್ತೊಮ್ಮೆ ಸಿಎಸ್​ಕೆ ತಂಡದ ಪರ ಇಂಗಿತವನ್ನು ಅಶ್ವಿನ್ ವ್ಯಕ್ತಪಡಿಸಿದ್ದಾರೆ.

3 / 5
ಇತ್ತ ಟೀಮ್ ಇಂಡಿಯಾ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿರುವ ಅಶ್ವಿನ್ ಮುಂದಿನ ಸೀಸನ್​ನ ಮೆಗಾ ಹರಾಜಿನ ಮೂಲಕ ಸಿಎಸ್​ಕೆ ಪರ ಮತ್ತೆ ಕಾಣಿಸಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹೀಗಾಗಿ ಚೆನ್ನೈ ಫ್ರಾಂಚೈಸಿ ಅಶ್ವಿನ್ ಅವರ ಖರೀದಿಗಾಗಿ ಪೈಪೋಟಿ ನಡೆಸುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಏಕೆಂದರೆ...

4 / 5
2010 ರಿಂದ 2015ರವರೆಗೆ ಸಿಎಸ್​ಕೆ ಪರ ಆಡಿದ್ದ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸಿಎಸ್​ಕೆ ಪರ 94 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದ ಅಶ್ವಿನ್ ಒಟ್ಟು  90 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ 2016-2017 ರಲ್ಲಿ ಸಿಎಸ್​ಕೆ ತಂಡವು ಅಮಾನತುಗೊಂಡಾಗ ಅಶ್ವಿನ್ ಬೇರೆ ತಂಡಗಳ ಪಾಲಾದರು. ಇದೀಗ ಮತ್ತೊಮ್ಮೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ತವರಿಗೆ ಮರಳುವ ವಿಶ್ವಾಸದಲ್ಲಿದ್ದಾರೆ ಸಿಎಸ್​ಕೆ ತಂಡದ ಮಾಜಿ ಸ್ಪಿನ್ನರ್ ಆರ್​. ಅಶ್ವಿನ್

5 / 5
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?