IPL 2022: RCB ರಿಟೈನ್ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆ: ಯುವ ಆಟಗಾರನನ್ನು ರಿಲೀಸ್ ಮಾಡೋದು ಡೌಟ್

| Updated By: ಝಾಹಿರ್ ಯೂಸುಫ್

Updated on: Nov 28, 2021 | 8:26 PM

IPL 2022 Rcb Retained Players: ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

1 / 6
 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗೂ ಮುನ್ನ ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾರನ್ನೆಲ್ಲಾ ಉಳಿಸಿಕೊಳ್ಳಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ. ಇನ್ನುಳಿದ ಆಟಗಾರರ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

2 / 6
 ಈ ಹಿಂದೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಆಯ್ಕೆಯಾಗಿದೆ ಎಂದು ತಿಳಿಸಲಾಗಿತ್ತು. ಅಷ್ಟೇ ಅಲ್ಲದೆ 3ನೇ ಹಾಗೂ 4ನೇ ಆಟಗಾರರಾಗಿ ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್, ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್​ ಹೆಸರುಗಳು ಕೇಳಿ ಬಂದಿತ್ತು. ಆದರೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಕೆಎಸ್ ಭರತ್.

3 / 6
ಹೌದು, ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಕೆಎಸ್ ಭರತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದೆ. ಭರತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸೀಸನ್​ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಕೂಡ ಆರ್​ಸಿಬಿ ಖರೀದಿಸಬೇಕಿದೆ.

4 / 6
ಆದರೆ ಪ್ರಸ್ತುತ ತಂಡದಲ್ಲಿರುವ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರನ್ನೇ ಉಳಿಸಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಬಲಗೈ ವಿಕೆಟ್ ಕೀಪರ್ ಬ್ಯಾಟ್ಸರ್​ ಆರ್​ಸಿಬಿ ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

5 / 6
ಇನ್ನು ಆರ್​ಸಿಬಿ ತಂಡವು ಮೂರನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲೇ ಇರಿಸಿಕೊಳ್ಳುವ ಬಯಸಿದೆ. ಒಂದು ವೇಳೆ ಚಹಲ್ ಅವರನ್ನು ರಿಟೈನ್ ಮಾಡಿದರೆ, ಕೆಎಸ್​ ಭರತ್​ಗೆ ಅವರು ನಾಲ್ಕನೇ ಆಟಗಾರನಾಗಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಪಡಿಕ್ಕಲ್ ಹಾಗೂ ಕೆಎಸ್​ ಭರತ್ ಹೆಸರುಗಳು ಚರ್ಚೆಯಲ್ಲಿದೆ ಎಂದು ಆರ್​ಸಿಬಿ ಮೂಲಗಳಿಂದ ತಿಳಿದು ಬಂದಿದೆ.

6 / 6
 ಒಟ್ಟಿನಲ್ಲಿ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Published On - 8:14 pm, Sun, 28 November 21