IPL 2022: RCB ಇಬ್ಬರನ್ನು ಮಾತ್ರ ಉಳಿಸಿಕೊಳ್ಳುವ ಸಾಧ್ಯತೆ..!

| Updated By: ಝಾಹಿರ್ ಯೂಸುಫ್

Updated on: Nov 27, 2021 | 7:06 PM

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

1 / 6
ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 6
ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

3 / 6
ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

4 / 6
ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

5 / 6
ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

6 / 6
ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.