IPL 2022: ಐಪಿಎಲ್ ರಿಟೆನ್ಶನ್ ಪ್ರಕ್ರಿಯೆ: ಯಾವಾಗ, ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
TV9 Web | Updated By: ಝಾಹಿರ್ ಯೂಸುಫ್
Updated on:
Nov 29, 2021 | 9:28 PM
IPL 2022 Retention: 8 ಫ್ರಾಂಚೈಸಿಗಳಿಗೂ ಆಟಗಾರರ ರಿಟೈನ್ಗಾಗಿ ಮೊತ್ತ ನಿಗದಿ ಮಾಡಲಾಗಿದೆ. ಅಂದರೆ ಇಲ್ಲಿ ಒಂದು ತಂಡವು ನಾಲ್ವರನ್ನು ಉಳಿಸಿಕೊಳ್ಳಲು ಬಯಸಿದರೆ 42 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಒಂದು ವೇಳೆ ಮೂವರನ್ನು ಮಾತ್ರ ಉಳಿಸುವುದಾದರೆ 33 ಕೋಟಿ ರೂ. ನೀಡಬೇಕಾಗುತ್ತದೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 (IPL 2022) ಮೆಗಾ ಹರಾಜಿನ ಸಿದ್ದತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಮುಂದಿನ ಸೀಸನ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆ ನೀಡಲಾಗಿದೆ. ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಅದರಂತೆ ಹಳೆಯ 8 ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ನಾಳೆ (ನ.30) ಕೊನೆಯ ದಿನಾಂಕ.
2 / 6
ಇದಾದ ಬಳಿಕ ಉಳಿದ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಆಟಗಾರರಿಂದ ತಲಾ ಮೂವರನ್ನು ಆಯ್ಕೆ ಮಾಡುವ ಅವಕಾಶ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗೆ ಇರಲಿದೆ. ಅಂದರೆ ಮೆಗಾ ಹರಾಜಿಗೂ ಮುನ್ನ 33 ಕೋಟಿಯೊಳಗೆ ಹೊಸ ಎರಡು ಫ್ರಾಂಚೈಸಿಗಳು ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು.
3 / 6
ಅಂದರೆ ಇಲ್ಲಿ ಮೊದಲ ಆಟಗಾರನಿಗೆ 15 ಕೋಟಿ, 2ನೇ ಆಟಗಾರನಿಗೆ 11 ಕೋಟಿ ಹಾಗೂ 3ನೇ ಆಟಗಾರನಿಗೆ 8 ಕೋಟಿ ವ್ಯಯಿಸಬೇಕಾಗುತ್ತದೆ. ಅದರಂತೆ 33 ಕೋಟಿಯೊಳಗೆ ಇಬ್ಬರು ಭಾರತೀಯ ಆಟಗಾರರು+ ಒಬ್ಬ ವಿದೇಶಿ ಆಟಗಾರನನ್ನು ಮೆಗಾ ಹರಾಜು ಪಟ್ಟಿಯಿಂದ ಹೊಸ ಫ್ರಾಂಚೈಸಿಗಳು ಆಯ್ಕೆ ಮಾಡಿಕೊಳ್ಳಬಹುದು. ಆ ಬಳಿಕವಷ್ಟೇ ಮೆಗಾ ಹರಾಜು ನಡೆಯಲಿದೆ. ಇದರಿಂದ ಹರಾಜಿನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ 6 ಸ್ಟಾರ್ ಆಟಗಾರರನ್ನು ಆಯ್ಕೆ ಮಾಡುವ ಆಯ್ಕೆ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗೆ ಸಿಗಲಿದೆ.
4 / 6
ಇನ್ನು ಉಳಿದ 8 ಫ್ರಾಂಚೈಸಿಗಳಿಗೂ ಆಟಗಾರರ ರಿಟೈನ್ಗಾಗಿ ಮೊತ್ತ ನಿಗದಿ ಮಾಡಲಾಗಿದೆ. ಅಂದರೆ ಇಲ್ಲಿ ಒಂದು ತಂಡವು ನಾಲ್ವರನ್ನು ಉಳಿಸಿಕೊಳ್ಳಲು ಬಯಸಿದರೆ 42 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಒಂದು ವೇಳೆ ಮೂವರನ್ನು ಮಾತ್ರ ಉಳಿಸುವುದಾದರೆ 33 ಕೋಟಿ ರೂ. ನೀಡಬೇಕಾಗುತ್ತದೆ. ಇನ್ನು ಇಬ್ಬರು ಆಟಗಾರರನ್ನು ಉಳಿಸಿಕೊಂಡರೆ 24 ಕೋಟಿ. ರೂ ನೀಡಬೇಕು. ಒಂದು ವೇಳೆ ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ. ರೂ ನೀಡಬೇಕಾಗುತ್ತದೆ. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ರೂ. ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ.
5 / 6
ಹೀಗಾಗಿ ಯಾವ ತಂಡ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈ ಕುತೂಹಲಕ್ಕೆ ಮಂಗಳವಾರ ಸಂಜೆ ಸ್ಪಷ್ಟ ಉತ್ತರ ಸಿಗಲಿದೆ. ಏಕೆಂದರೆ ಈ ರಿಟೆನ್ಶನ್ ಪ್ರಕ್ರಿಯೆಯು ನೇರ ಪ್ರಸಾರವಾಗಲಿದ್ದು, ಐಪಿಎಲ್ ಕ್ರಿಕೆಟ್ ಪ್ರೇಮಿಗಳು ಪ್ರತಿ ತಂಡಗಳ ರಿಟೈನ್ ಆಟಗಾರರ ಪಟ್ಟಿಯನ್ನು ವೀಕ್ಷಿಸಬಹುದು.
6 / 6
IPL 2022 ಆಟಗಾರರನ್ನು ರಿಟೈನ್ ಪ್ರಕಿಯೆಯು ನವೆಂಬರ್ 30 ರಂದು, ಸಂಜೆ 5 ಗಂಟೆಯಿಂದ ಶುರುವಾಗಲಿದೆ. ಈ ರಿಟೈನ್ ಪಟ್ಟಿ ಸಲ್ಲಿಕೆ ಕಾರ್ಯಕ್ರಮವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಜೊತೆಗೆ ಡಿಸ್ನಿ+ ಹಾಟ್ಸ್ಟಾರ್ನಲ್ಲೂ (Disney + Hotstar) ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.