AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜಿನಲ್ಲಿ ಶ್ರೀಶಾಂತ್: ಮೂಲ ಬೆಲೆ ಎಷ್ಟು ಗೊತ್ತಾ?

IPL 2022 Mega Auction: 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು.

TV9 Web
| Edited By: |

Updated on: Jan 26, 2022 | 5:43 PM

Share
 ಐಪಿಎಲ್ ಸೀಸನ್ 15 ಮೆಗಾ ಹರಾಜಿಗಾಗಿ ಒಟ್ಟು  1214 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 318 ವಿದೇಶಿ ಆಟಗಾರರಿದ್ದರೆ, 896 ಭಾರತೀಯ ಆಟಗಾರಿದ್ದಾರೆ. ಇದರಲ್ಲಿ ಕೇರಳ ವೇಗಿ ಎಸ್​ ಶ್ರೀಶಾಂತ್ ಕೂಡ ಇರುವುದು ವಿಶೇಷ.

1 / 5
 ಈ ಹಿಂದೆ ಐಪಿಎಲ್​ ತಂಡದ ಭಾಗವಾಗಿದ್ದ ಶ್ರೀಶಾಂತ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಅವರ ಮೇಲೆ ನಿಷೇಧ ಹೇರಲಾಗಿತ್ತು. 2019 ರಲ್ಲಿ ಶ್ರೀಶಾಂತ್‌ಗೆ ವಿಧಿಸಲಾದ ಜೀವಾವಧಿ ನಿಷೇಧ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಮರುಪರಿಶೀಲಿಸಲಾಗಿತ್ತು. ಅದರಂತೆ ಬಿಸಿಸಿಐ ಅವರ ನಿಷೇಧವನ್ನು 7 ವರ್ಷಕ್ಕೆ ಇಳಿಸಿತು. ಹೀಗಾಗಿ 2020 ರ ಸೆಪ್ಟೆಂಬರ್​ನಲ್ಲಿ ಶ್ರೀಶಾಂತ್ ದೇಶೀಯ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದರು.

2 / 5
2013 ರಲ್ಲಿ ಕೊನೆಯ ಬಾರಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್, ಇದುವರೆಗೆ ಐಪಿಎಲ್​ನಲ್ಲಿ 3 ತಂಡಗಳ ಪರ ಕಣಕ್ಕಿಳಿದಿದ್ದರು. ಅದರಂತೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್​ ಹಾಗೂ ಕೊಚ್ಚಿ ಟಸ್ಕರ್ಸ್ ಪರ ಆಡಿದ್ದರು. ಈ ವೇಳೆ ಒಟ್ಟು 44 ಪಂದ್ಯಗಳನ್ನಾಡಿರುವ ಶ್ರೀ 44 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
ಅಷ್ಟೇ ಅಲ್ಲದೆ 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು. ಕಳೆದ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶ್ರೀಶಾಂತ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

4 / 5
ಇದೀಗ ಈ ಬಾರಿ ಮೆಗಾ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಶ್ರೀಶಾಂತ್ ಹೆಸರು ನೀಡಿದ್ದಾರೆ. ಈ ಬಾರಿ ಒಟ್ಟು 10 ತಂಡಗಳಿದ್ದು, ಹೀಗಾಗಿ ಯಾವುದಾದರೂ ಒಂದು ಫ್ರಾಂಚೈಸಿ ಖರೀದಿಸುವ ವಿಶ್ವಾಸದಲ್ಲಿದ್ದಾರೆ 38 ವರ್ಷದ ಶಾಂತಕುಮಾರನ್ ಶ್ರೀಶಾಂತ್.

5 / 5
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು

ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ

ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!

ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ

ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್

ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್

ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ

ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ

ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ