IPL 2022: ಮೂರು ಸ್ಟೇಡಿಯಂಗಳಲ್ಲಿ ಐಪಿಎಲ್ನ ಲೀಗ್ ಹಂತದ ಪಂದ್ಯಗಳು..!
TV9 Web | Updated By: ಝಾಹಿರ್ ಯೂಸುಫ್
Updated on:
Feb 21, 2022 | 5:49 PM
IPL 2022: ಏಕೆಂದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ 10 ಸ್ಟೇಡಿಯಂಗಳಲ್ಲಿ ಪಂದ್ಯವನ್ನು ಆಯೋಜಿಸುವುದು ಸುಲಭವಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ಲೀಗ್ ಹಂತದ ಪಂದ್ಯಗಳನ್ನು ನಡೆಸಲು ಪ್ಲ್ಯಾನ್ ರೂಪಿಸಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಿದೆ. ಅದರಂತೆ ಈ ಬಾರಿ ಭಾರತದಲ್ಲೇ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಆದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಒಂದೇ ನಗರದಲ್ಲಿ ಟೂರ್ನಿ ಆಯೋಜಿಸಲು ತೀರ್ಮಾನಿಸಲಾಗಿದೆ.
2 / 5
ಏಕೆಂದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ 10 ಸ್ಟೇಡಿಯಂಗಳಲ್ಲಿ ಪಂದ್ಯವನ್ನು ಆಯೋಜಿಸುವುದು ಸುಲಭವಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ಲೀಗ್ ಹಂತದ ಪಂದ್ಯಗಳನ್ನು ನಡೆಸಲು ಪ್ಲ್ಯಾನ್ ರೂಪಿಸಿದೆ. ಅಲ್ಲದೆ ಪ್ಲೇಆಫ್ ಹಂತದ ಪಂದ್ಯಗಳನ್ನು ಅಹಮದಾಬಾದ್ನಲ್ಲಿ ನಡೆಸುವ ಸಾಧ್ಯತೆಯಿದೆ.
3 / 5
ಅದರಂತೆ ಮಹಾರಾಷ್ಟ್ರದ ಡಿವೈ ಪಾಟೀಲ್ ಸ್ಟೇಡಿಯಂ, ವಾಂಖೆಡೆ ಸ್ಟೇಡಿಯಂ ಹಾಗೂ ಬ್ರಬೋರ್ನ್ ಸ್ಟೇಡಿಯಂ ನಲ್ಲಿ ಇಡೀ ಟೂರ್ನಿ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದಲ್ಲದೆ ಹೆಚ್ಚುವರಿಯಾಗಿ ರಿಲಯನ್ಸ್ ಸ್ಟೇಡಿಯಂ ಅನ್ನು ಕೂಡ ಬಳಸಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ.
4 / 5
ಸದ್ಯದ ಮಾಹಿತಿ ಪ್ರಕಾರ ಮಾರ್ಚ್ 26 ರಿಂದ ಟೂರ್ನಿಗೆ ಚಾಲನೆ ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಮಹಾರಾಷ್ಟ್ರದ ಈ ಮೂರು ಸ್ಟೇಡಿಯಂನಲ್ಲಿ ಬಯೋ ಬಬಲ್ ವ್ಯವಸ್ಥೆಯೊಂದಿಗೆ ಲೀಗ್ ಹಂತದ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.
5 / 5
ಈ ಬಾರಿ ಐಪಿಎಲ್ನಲ್ಲಿ 10 ತಂಡಗಳಿರಲಿದ್ದು, ಅದರಂತೆ ಪಂದ್ಯಗಳ ಸಂಖ್ಯೆ ಕೂಡ ಹೆಚ್ಚಾಗಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿ 10 ತಂಡಗಳನ್ನು 5 ತಂಡಗಳಂತೆ ಎರಡು ಗುಂಪುಗಳಾಗಿ ಮಾಡಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. ಈ ಮೂಲಕ ಒಟ್ಟು 74 ಪಂದ್ಯಗಳನ್ನು ಆಡಿಸುವ ಇರಾದೆಯಲ್ಲಿದೆ ಬಿಸಿಸಿಐ.