IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

Ipl 2022: ಸದ್ಯ ಉಮ್ರಾನ್ ಮಲಿಕ್ ಅವರ ಬೌಲಿಂಗ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಯುವ ವೇಗಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅನೇಕ ಮಾಜಿ ಆಟಗಾರರು ಸಲಹೆ ನೀಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:May 18, 2022 | 5:43 PM

ಐಪಿಎಲ್​ ಸೀಸನ್​ 15 ನಲ್ಲಿ ಯುವ ವೇಗಿ ಉಮ್ರಾನ್ ಮಲಿಕ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ತಂಡದ ವೇಗದ ಅಸ್ತ್ರವಾಗಿ ಗುರುತಿಸಿಕೊಂಡಿರುವ ಉಮ್ರಾನ್ ಈಗಾಗಲೇ 157 ಕಿ.ಮೀ ವೇಗದಲ್ಲಿ ಚೆಂಡೆಸೆದು ದಾಖಲೆ ನಿರ್ಮಿಸಿದ್ದಾರೆ. ಇದೀಗ ಮತ್ತೊಂದು ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದ್ದಾರೆ.

1 / 6
ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ 3 ವಿಕೆಟ್ ಉರುಳಿಸುವ ಮೂಲಕ ಉಮ್ರಾನ್ ಎಸ್​ಆರ್​​ಹೆಚ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ 3 ವಿಕೆಟ್​ಗಳೊಂದಿಗೆ ಇದೀಗ ಐಪಿಎಲ್​ನಲ್ಲಿ ಉಮ್ರಾನ್ ಒಟ್ಟು ವಿಕೆಟ್​ಗಳ ಸಂಖ್ಯೆ 21 ಕ್ಕೇರಿದೆ. ಅಷ್ಟೇ ಅಲ್ಲದೆ ಪರ್ಪಲ್​ ಕ್ಯಾಪ್​ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

2 / 6
ವಿಶೇಷ ಎಂದರೆ ಐಪಿಎಲ್‌ನ ಒಂದು ಸೀಸನ್‌ನಲ್ಲಿ 20 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತದ ಅತ್ಯಂತ ಕಿರಿಯ ಬೌಲರ್ ಎಂಬ ದಾಖಲೆ ಇದೀಗ ಉಮ್ರಾನ್ ಮಲಿಕ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

3 / 6
ಬುಮ್ರಾ 2017 ರ ಐಪಿಎಲ್​ನಲ್ಲಿ 20 ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು. ಈ ವೇಳೆ ಜಸ್ಪ್ರೀತ್ ಬುಮ್ರಾ ಅವರ ವಯಸ್ಸು 23 ವರ್ಷ 165 ದಿನಗಳು. ಈ ಮೂಲಕ ಬುಮ್ರಾ ಐಪಿಎಲ್​ನಲ್ಲಿ 20 ವಿಕೆಟ್ ಪಡೆದ ಭಾರತದ ಅತ್ಯಂತ ಕಿರಿಯ ವೇಗಿ ಎನಿಸಿಕೊಂಡಿದ್ದರು.

4 / 6
ಆದರೀಗ 22 ವರ್ಷ 176 ದಿನಗಳಲ್ಲಿ ಉಮ್ರಾನ್ ಮಲಿಕ್ 23 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಐಪಿಎಲ್​ ಸೀಸನ್​ವೊಂದರಲ್ಲಿ 20 ಕ್ಕಿಂತ ಅಧಿಕ ವಿಕೆಟ್ ಪಡೆದ ಅತ್ಯಂತ ಕಿರಿಯ ವೇಗಿ ಎಂಬ ಹೊಸ ದಾಖಲೆ ನಿರ್ಮಿಸಿದ್ದಾರೆ.

5 / 6
ಸದ್ಯ ಉಮ್ರಾನ್ ಮಲಿಕ್ ಅವರ ಬೌಲಿಂಗ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಯುವ ವೇಗಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅನೇಕ ಮಾಜಿ ಆಟಗಾರರು ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಉಮ್ರಾನ್ ಮಲಿಕ್ ಅವರ ವೇಗಭರಿತ ಬೌಲಿಂಗ್​ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಮ್ಮು-ಕಾಶ್ಮೀರದ ಯುವ ವೇಗಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡರೆ ಅಚ್ಚರಿಯಿಲ್ಲ ಎಂದಿದ್ದಾರೆ.

6 / 6

Published On - 5:36 pm, Wed, 18 May 22

Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?